Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೆರಿಲ್ಲಾ ಹೋರಾಟಗಾರ ರಾಯಣ್ಣ ಬ್ರಿಟಿಷರಿಗೆ ಸಿಂಹಸ್ವಪ್ನ ಆಗಿದ್ದ: ನಮ್ಮವರೇ ಬ್ರಿಟಿಷರಿಗೆ ಹಿಡಿದುಕೊಟ್ಟರು: ಸಿಎಂ

ಗೋಕಾಕ : ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು ಕಾಲ ಬದುಕಿದ್ದರೆ ಕಿತ್ತೂರಿನ ಮೇಲೆ ಬ್ರಿಟೀಷರ ಕಣ್ಣುಬೀಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಗೋಕಾಕದ ಕಳ್ಳಿಗುದ್ದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು. ಇಲ್ಲದೇ ಹೋಗಿದ್ದರೆ ಇನ್ನಷ್ಟು ಕಾಲ ಕ್ರಾಂತಿಕಾರಿ ಗೆರಿಲ್ಲಾ ಹೋರಾಟ ಮುಂದುವರೆದು ಬ್ರಿಟೀಷರಿಗೆ ನೀರು ಕುಡಿಸುತ್ತಿದ್ದ ಎಂದರು.

ರಾಯಣ್ಣನ ದೇಶಪ್ರೇಮ, ಜನಪ್ರೇಮವನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ಆರಂಭಿಸಿದ್ದೇವೆ. ನೀವೆಲ್ಲಾ ಸಂಗೊಳ್ಳಿಗೆ ಭೇಟಿ ನೀಡಿ ಎಂದು ಕರೆ ನೀಡಿದರು.

ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಮುಖ್ಯಸಚೇತಕ ಅಶೋಕ್ ಪಟ್ಟಣ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷರಾದ ಡಾ.ಸಣ್ಣಕ್ಕಿ ಅವರು ಉಪಸ್ಥಿತರಿದ್ದರು.

*ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇಲ್ಲೂ ಇದ್ದಾರೆ: ಸಿಎಂ*

*ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ: ಬಿಜೆಪಿ ಗೆ ಎಚ್ಚರಿಕೆ ಕೊಟ್ಟ ಸಿಎಂ*

ಗೋಕಾಕ : ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು.

ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು.

ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟೀಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು. ಆದರೆ ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು.

ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ . ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ ಎಂದರು.

ಇಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ. ಈ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂದರು.

ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಅದಕ್ಕೇ ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಬಿಜೆಪಿಯವರು ಭಯಾನಕ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಬಾಗೋಜಿಕೊಪ್ಪ ಮಠದ ಶಿವಲಿಂಗ ಮುರುಘರಾಜೇಂದ್ರ ಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ, ಶಾಸಕರಾ ಬಾಲಚಂದ್ರ ಜಾರಕಿಹೊಳಿ ಹಾಗೂ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

*40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ: ಸಿಎಂ ವ್ಯಂಗ್ಯ*

*ನಾವು-ನೀವು ಒಟ್ಟಾಗಿ ಷಡ್ಯಂತ್ರ ಸೋಲಿಸೋಣ: ಸಿಎಂ‌ ಕರೆ*

ಗೋಕಾಕ : ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಕಲ್ಲೋಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇಷ್ಟು ವರ್ಷ ಮಾಡದ ತಪ್ಪನ್ನು ಈಗ ಮಾಡ್ತೀನಾ? ನಾನು ಮಾಡದಿರುವ ತಪ್ಪನ್ನು ಷಡ್ಯಂತ್ರದಿಂದ ನನ್ನ ತಲೆಗೆ ಕಟ್ಟುವ ಪ್ರಯತ್ನ ಮಾಡ್ತಿದ್ದಾರೆ. ನಾವು-ನೀವು ಒಟ್ಟಾಗಿ ಈ ಷಡ್ಯಂತ್ರ ಸೋಲಿಸೋಣ. ಎಲ್ಲರೂ ಒಟ್ಟಾಗಿರಿ. 7 ಕೋಟಿ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನನ್ನನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದರು.

ಹಿಂದುಳಿದ ಸಮುದಾಯದಿಂದ ಬಂದು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿ-ಜೆಡಿಎಸ್ ಗೆ ಸಹಿಸಲು ಆಗುತ್ತಿಲ್ಲ. ಆದ್ದರಿಂದ ನಮಗಮ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ಕೊಡಬಾರದು. ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಬಡವರ, ಮಧ್ಯಮ ವರ್ಗದವರ ಪರವಾದ ಗ್ಯಾರಂಟಿ ಕಾರ್ಯಕ್ರಮಗಳು ಜಾರಿಯಲ್ಲಿದ್ದು ಸದಾ ನಮ್ಮ ನೆರವಿನ ಹಸ್ತ ಬಡವರ ಪರವಾಗಿ ಇರುತ್ತದೆ ಎಂದರು.

ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ