Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹರ್ಷಾ,ಶಬರಿ ಹೊಟೇಲ್‌ ಮಾಲಿಕ ಸುರೇಶ ನಾಯರಿ ನಿಧನ..!

ಹರ್ಷಾ,ಶಬರಿ ಹೊಟೇಲ್‌ ಮಾಲಿಕ ಸುರೇಶ ನಾಯರಿ ನಿಧನ..!

ಬೆಳಗಾವಿ: ನಗರದ ಪ್ರತಿಷ್ಠಿತ ಹರ್ಷಾ ಹೊಟೇಲ್, ಶಬರಿ ಹೊಟೇಲ್‌ ಮಾಲಕರಾದ, ರಾಮತೀರ್ಥ‌ನಗರ ನಿವಾಸಿ ಮೂಲತಃ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಸುರೇಶ ಗಣಪಯ್ಯ ನಾಯರಿ(52) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನ ಹೊಂದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ‌ ಫಲಿಸದೇ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ನಾಳೆ(ನ. 14ರಂದು) ಸಂಜೆ 4 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸುರೇಶ ನಾಯರಿ ಅವರು 1971ರಲ್ಲಿ ಜನಿಸಿದ್ದು, ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿ ಮುಗಿಸಿ,1987ರಲ್ಲಿ ಅಣ್ಣನೊಂದಿಗೆ ಬೆಳಗಾವಿಯಲ್ಲಿ ಪಾನ್ ಅಂಗಡಿ ಹಾಗೂ ಟೀ ಸ್ಟಾಲಿನಲ್ಲಿ ಕೆಲಸ ಆರಂಭಿಸಿದರು. ನಾಲ್ಕೈದು ವರ್ಷಗಳ ಉದ್ಯಮದ ಅನುಭವದೊಂದಿಗೆ 1991ರಲ್ಲಿ ಸ್ವಂತ ಉದ್ಯಮವನ್ನು ಕೆಎಲ್ ಇ ಆಸ್ಪತ್ರೆಯ ಹತ್ತಿರ ಪ್ರಾರಂಭಿಸಿದರು.

ಆಟೋ ನಗರದಲ್ಲಿ 2001ರಲ್ಲಿ ಹರ್ಷಾ ಫ್ಯಾಮಿಲಿ ರೆಸ್ಟೊರೆಂಟ್, ರಾಮದೇವ ಹೊಟೇಲ್ ಪಕ್ಕದಲ್ಲಿ 2013ರಲ್ಲಿ ಶಬರಿ ಹೊಟೇಲ್, ಶಿವಬಸವ ನಗರದ ಕೆಪಿಟಿಸಿಎಲ್ ಸಭಾಭವನ ಎದುರು 2019ರಲ್ಲಿ ಶ್ರೀ ಸಾಯಿ ಶಬರಿ ಹೊಟೇಲ್ ಆರಂಭಿಸಿದರು. ಮೇ‌ 25ರಂದು ಆಟೋ ನಗರದ ಮೊದಲಿನ ಹರ್ಷಾ ಹೊಟೇಲ್ ಅನ್ನು ಅತ್ಯಾಧುನಿಕ ಸೌಲಭ್ಯವುಳ್ಳ, ಹೊಸ ವಿನ್ಯಾಸದೊಂದಿಗೆ ಲೋಕಾರ್ಪಣೆಯಾಗಿದೆ. ಗುರು ವಿವೇಕಾನಂದ ಸೊಸೈಟಿ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.‌ ಅನೇಕ ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲಿ‌ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ