Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶೀಘ್ರದಲ್ಲೇ ಪಿಒಕೆ ಭಾರತಕ್ಕೆ ವಾಪಸ್‌ : 370ನೇ ವಿಧಿ ರದ್ದತಿಗೆ ಮುಕ್ತಕಂಠದಿಂದ ಶ್ಲಾಘಿಸಿದ ಅಖಿಲ ಭಾರತ ಇಮಾಮ್ ಸಂಘಟನೆ ಮುಖ್ಯಸ್ಥ

ಶ್ರೀನಗರ: ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯಸ್ಥ ಉಮರ್ ಅಹ್ಮದ್ ಇಲ್ಯಾಸಿ ಅವರು ಶುಕ್ರವಾರ ಕಾಶ್ಮೀರಕ್ಕೆ ಭೇಟಿ ನೀಡಿದ ವೇಳೆ ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ಮಾಡಿದ್ದನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಶೀಘ್ರದಲ್ಲೇ ಭಾರತಕ್ಕೆ ಸೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “370ನೇ ವಿಧಿ ರದ್ದತಿಯ ನಂತರ ಹೊಸ ಕಾಶ್ಮೀರ ನಿರ್ಮಾಣವಾಗಿದೆ. ಇಂದು ಕಾಶ್ಮೀರ ಬದಲಾಗುತ್ತಿದೆ ಮತ್ತು ಸಮೃದ್ಧಿಯತ್ತ ಸಾಗುತ್ತಿದೆ. ಹಿಂದೆ ಯುವಕರು ಕಲ್ಲು ತೂರಾಟ ನಡೆಸುತ್ತಿದ್ದ ಜಾಗದಲ್ಲಿ ಇಂದು ಅವರ ಕೈಯಲ್ಲಿ ಪೆನ್ನುಗಳಿವೆ, ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ,” ಎಂದು ಸಂತಸ ವ್ಯಕ್ತಪಡಿಸಿದರು.

ಪಿಒಕೆ ಭಾರತದ ಅವಿಭಾಜ್ಯ ಅಂಗ:
ಪಹಲ್ಗಾಮ್ ದಾಳಿಯ ನಂತರ ಪ್ರವಾಸೋದ್ಯಮದ ಮೇಲಾದ ಪರಿಣಾಮದ ಬಗ್ಗೆ ಮಾತನಾಡಿದ ಅವರು, “ಕಾಶ್ಮೀರ ಈಗ ಸುರಕ್ಷಿತವಾಗಿದೆ. ಇಲ್ಲಿ ಯಾವುದೇ ಭಯದ ವಾತಾವರಣವಿಲ್ಲ. ದೇಶದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಭೇಟಿ ನೀಡಬೇಕು,” ಎಂದು ಮನವಿ ಮಾಡಿದರು.
ಹಜರತ್‌ಬಾಲ್ ದರ್ಗಾಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, “ಪಿಒಕೆ ಭಾರತದ ಅವಿಭಾಜ್ಯ ಅಂಗವಾಗಿದ್ದು, ಅದು ಖಂಡಿತವಾಗಿಯೂ ಭಾರತಕ್ಕೆ ಮರಳಲಿದೆ. ಕಾಶ್ಮೀರದ ಅಭಿವೃದ್ಧಿಯನ್ನು ನೋಡುತ್ತಿರುವ ಅಲ್ಲಿನ ಜನರು ಭಾರತಕ್ಕೆ ಮರಳಲು ಬಯಸುತ್ತಿದ್ದಾರೆ. ಪಿಒಕೆ ಶೀಘ್ರದಲ್ಲೇ ನಮ್ಮದಾಗಲಿದೆ,” ಎಂದರು.

ಜಮ್ಮು ಮತ್ತು ಕಾಶ್ಮೀರ ವಕ್ಫ್ ಮಂಡಳಿಯ ಅಧ್ಯಕ್ಷೆ ಹಾಗೂ ಬಿಜೆಪಿ ನಾಯಕಿ ಡಾ. ದರಕ್ಷನ್ ಅಂದ್ರಾಬಿ ಅವರ ಕೆಲಸವನ್ನು ಇಲ್ಯಾಸಿ ಕೊಂಡಾಡಿದರು. “ಅವರ ಕಾರ್ಯವೈಖರಿ ನಮಗೆ ಮಾದರಿಯಾಗಿದೆ. ಜಮ್ಮು-ಕಾಶ್ಮೀರ ವಕ್ಫ್ ಮಂಡಳಿಯನ್ನು ಅವರು ಅತ್ಯುತ್ತಮವಾಗಿ ಮುನ್ನಡೆಸುತ್ತಿದ್ದಾರೆ,” ಎಂದು ಶ್ಲಾಘಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ