Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?

ಬೆಂಗಳೂರು: ತಮ್ಮ ಪತ್ನಿಯ ಆರೋಗ್ಯದಲ್ಲಿ ಏರಪೇರು ಉಂಟಾಗಿರುವ ಕಾರಣ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬುಧವಾರ ತಡ ರಾತ್ರಿ ದಿಢೀರ್ ಆಗಿ ಇಂದೋ‌ರ್ ತೆರಳಿದ್ದಾರೆ. ಅವರ ಮರಳಿ ಬರುವ ಸಮಯ ನಿಗದಿ ಆಗಿಲ್ಲ ಎಂದು ಲೋಕಭವನದ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವರು ಲೋಕಭವನಕ್ಕೆ ಬಂದು ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಬಹುದು. ಅದನ್ನು ಲೋಕಭವನದಿಂದ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಅವರ ಅಲ್ಲಿಂದಲೇ (ಇಂದೋರ್) ಈ ಬಗ್ಗೆ ಮುಂದಿನ ಕ್ರಮವನ್ನು ಸೂಚಿಸಬಹುದು. ಇಂದೋರ್‌ನಿಂದ ವಾಪಸ್ ಬಂದ ಬಳಿಕ ಸಿದ್ದರಾಮಯ್ಯ ಅವರನ್ನು ಲೋಕಭವನಕ್ಕೆ ಕರೆಸಿಕೊಂಡು ರಾಜ್ಯಪಾಲರು ಮಾತುಕತೆ ನಡೆಸಬಹುದು' ಎಂದೂ ಮೂಲಗಳು ಹೇಳಿವೆ.

ಕಾಂಗ್ರೆಸ್‌ ಹೈಕಮಾಂಡ್ ಸೂಚನೆಯಂತೆ ಪದತ್ಯಾಗಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ ಲೋಕಭವನಕ್ಕೆ ತೆರಳಿ ರಾಜಪಾಲರಿಗೆ ರಾಜೀನಾಮೆ ಪತ್ರ ನೀಡಲು ನಿರ್ಧರಿಸಿದ್ದಾರೆ. ಖುದ್ದು ಭೇಟಿಗೆ ರಾಜ್ಯಪಾಲರು ಲಭ್ಯ ಇಲ್ಲದೇ ಇರುವುದರಿಂದ ಅವರ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆಯಿದೆ.

'ರಾಜ್ಯಪಾಲರ ಪತ್ನಿ ಅನಾರೋಗ್ಯಗೊಂಡಿರುವ ಮಾಹಿತಿ ಬುಧವಾರ ರಾತ್ರಿ ಬಂತು. ತಕ್ಷಣವೆ ರಾಜ್ಯಪಾಲರು ಇಂದೋರ್‌ಗೆ ತೆರಳಿದ್ದಾರೆ. ಪತ್ನಿಯ ಆರೋಗ್ಯ ಸುಧಾರಿಸಿದ ನಂತರವೇ ಅವರ ವಾಪಸ್ ಆಗಬಹುದು. ಈ ಬಗ್ಗೆ ಖಚಿತ ಮಾಹಿತಿ ಇಲ್ಲ' ಎಂದು ಲೋಕಭವನದ ಮೂಲಗಳು ಹೇಳಿವೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ