Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರಿ ಮಳೆ ಮುನ್ಸೂಚನೆ ; ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಭಾರತ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಜೂನ್ 24 ರಿಂದ ಜೂನ್ 29ರ ವರೆಗೆ ಕರ್ನಾಟಕದಾದ್ಯಂತ ಮುಂಗಾರು ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಪ್ರಮುಖವಾಗಿ ಈ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಹಾಗೂ ಅತ್ಯಂತ ಭಾರಿ ಮಳೆಯ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 4 ದಿನವೂ ಅತಿ ಭಾರಿ ಮಳೆಯ ಮುನ್ಸೂಚನೆ ಇದೆ. ಜೂನ್‌ 24 ರಂದು ಉಡುಪಿ, ಉತ್ತರ ಕನ್ನಡದಲ್ಲಿ ಅತಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಜೂನ್‌ 25 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಚುರುಕು ಪಡೆಯಲಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜೂನ್‌ 25 ರಿಂದ 27 ರವರೆಗೂ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ನಂತರ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಜೂನ್ 25, 26 ಹಾಗೂ ಜೂನ್ 27 ಕ್ಕೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಾದ ಜೂನ್ 24 ಮತ್ತು 25 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಬೆಂಗಳೂರಲ್ಲಿ ಹಗುರದಿಂದ ಮಧ್ಯಮವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!