Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ 13 ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆ ಮುನ್ಸೂಚನೆ

Advertisement

ಬೆಂಗಳೂರು: ಮುಂಗಾರು ಕೊಂಚ ಚುರುಕುಗೊಂಡಿದ್ದು, ಮುಂದಿನ ಒಂದು ವಾರದ ಕಾಲ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 22ರಿಂದ ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ , ಹಾವೇರಿ, ಹಾಸನ , ಕೊಡಗು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಶಿವಮೊಗ್ಗ ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಜೂನ್‌ 27ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸತತವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂನ್ 22, 23 ಮತ್ತು 25 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 22 ಮತ್ತು 25 ರಂದು ಧಾರವಾಡ, ಹಾವೇರಿ, ಬೆಳಗಾವಿ, ಕೊಪ್ಪಳ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು ನಗರದಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ನಗರದ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 21°C ಇರಲಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೈಲ್ ನದಿಗೆ ಅಣೆಕಟ್ಟು ಕಥೆ...ಮುಂಗಾರಿನ ಉಲ್ಟಾ ಪಲ್ಟಾ ಆಟ : ರಾಜಸ್ಥಾನದ ಮರುಭೂಮಿ ಹಸಿರಾಗುತ್ತಿದೆ, ಮಳೆ ಬೀಳುವ ಪ್ರದೇಶಗಳು ಒಣಗುತ್ತಿವೆ ಯಾಕೆ ?ಕರ್ನಾಟಕದ 13 ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆ ಮುನ್ಸೂಚನೆಇದೇ ವರ್ಷದಿಂದ ವಿದ್ಯಾರ್ಥಿ ಚುನಾವಣೆ: ಪಂಚಾಯ್ತಿ, ವಾರ್ಡ್ ಮಟ್ಟದ ಗ್ಯಾರಂಟಿ ಸಮಿತಿಗಳ ರಚನೆ: ಸಿಎಂ ಡಿ.ಕೆ. ಶಿವಕುಮಾರ್ಐಪಿಎಲ್ ಅಲ್ಲ ಎಂದಿದ್ದ ಲಂಕಾ ವಿರುದ್ಧ ವೈಭವ್ ಸೇಡಿನ ಆಟ: ಲಂಕೆ ಆಟಗಾರರ ಮನೆಯಂಗಳದಲ್ಲೇ ಅಬ್ಬರಿಸಿದ ಸೂರ್ಯ...!ಗ್ರಿಲ್‌ಗೆ ಕೈಗಳನ್ನು ಕಟ್ಟಿದ್ದರು…ಬಾಯಿಗೆ ಬಟ್ಟೆ ತುರುಕಿದ್ದರು..: ಕಿಡ್ನ್ಯಾಪ್ ಪ್ರಕರಣ ಬೆನ್ನತ್ತಿದ ಪೊಲೀಸರು-ಕುಟುಂಬಸ್ಥರೇ ಬೆಸ್ತುಬಿದ್ದರು…!ಕಬಾಬ್‌ನಲ್ಲಿ ವಿಷಕಾರಿ ಕಲರ್ ಬಳಸಿದರೆ ಕ್ರಮಕಬಾಬ್‌ನಲ್ಲಿ ವಿಷಕಾರಿ ಕಲರ್ ಬಳಸಿದರೆ ಕ್ರಮಇಬ್ಬರ ಸಾವಿಗೆ ಕಾರಣವಾಯ್ತು ಅನೈತಿಕ ಸಂಬಂಧ : ಕೊಲೆಯಲ್ಲಿ ಅಂತ್ಯಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ “ಪ್ರಜಾಸೇವೆ ಇಲಾಖೆ” ಸ್ಥಾಪನೆ: ಸಿಎಂ ಡಿ.ಕೆ. ಶಿವಕುಮಾರ್