Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ 9 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಜೋರು ಮಳೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ರವಾನಿಸಿದೆ.

ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬುಧವಾರ (ಸೆಪ್ಟಂಬರ್‌ 25) ಭಾರೀ ಮಳೆ ಸುರಿಯುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ, ಉಡುಪಿ ಹಾಗೂ ಉತ್ತರ ಕನ್ನಡಗಳಲ್ಲಿ ಭಾರೀ ಮಳೆಯಾಗಲಿದ್ದು, ಮೂರೂ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಾಳಿಯ ವೇಗವೂ ಹೆಚ್ಚಿರಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.

ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಹಾಗೂ ಮಲೆನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬುಧವಾರ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಲಾಗಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮಳೆಯಾಗುವ ಸಾಧ್ಯತೆಗಳಿದ್ದು, ವೇಗವಾದ ಗಾಳಿಯ ಜತೆ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಬೀಳಬಹುದು ಎಂದು ಹೇಳಲಾಗಿದೆ. ಮಂಗಳವಾರ ಕರಾವಳಿ ಸೇರಿದಂತೆ ಹಲವು ಕಡೆಗಳಲ್ಲಿ ಜೋರಾಗಿ ಮಳೆಯಾಗಿದೆ. ರಾತ್ರಿಯ ವೇಳೆ ಮಳೆ ಜೋರಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ