Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಂದಿನಿಂದ ಕರ್ನಾಟಕದ ಹಲವೆಡೆ ಅತಿ ಭಾರಿ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹವಾಮಾನ ಇಲಾಖೆಯು ಜುಲೈ 2 ಕ್ಕೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಅಲ್ಲದೆ, 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಹವಾಮಾನ ಕೇಂದ್ರ ಬಿಡುಗಡೆ ಮಾಡಿರುವ ಮುನ್ಸೂಚನೆ ವರದಿಯ ಪ್ರಕಾರ, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ರಾಜ್ಯದ ಒಳನಾಡಿನ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಲಾಗಿದೆ. ಜುಲೈ 2 ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಪ್ರದೇಶಗಳಲ್ಲಿ 204.5 ಮಿ.ಮೀ ಗಿಂತಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಹಾಗೂ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ನಂತರ ಜುಲೈ 3 ಹಾಗೂ 4ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ. ನಂತರ ಮತ್ತೆ ಜುಲೈ 5ರಿಂದ 7ರ ವರೆಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಪಶ್ಚಿಮ ಘಟ್ಟದ ಸಾಲಿನಲ್ಲಿರುವ ಮಲೆನಾಡು ಮತ್ತು ಅದಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಜುಲೈ 5ರ ವರೆಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಜುಲೈ 5ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಜುಲೈ 7ರ ವರೆಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಮುಂದುವರೆಯಲಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿಯ ಬಂಧನಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರಬೆಳಗಾವಿಗೆ ಮತ್ತೆ ಅನ್ಯಾಯ : ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸುಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆಜೈಲಿನಲ್ಲಿದ್ದ ಪ್ರಿಯಕರನ ಭೇಟಿಗೆ ಬಂದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಸಿಕ್ಕಿತು 10 ಜೀವಂತ ಗುಂಡುಗಳು….!ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್‌ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್‌ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!