Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಅಬ್ಬರದ ಮುನ್ಸೂಚನೆ ; ಜುಲೈ 5 ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ನೈರುತ್ಯ ಮುಂಗಾರು ಕರ್ನಾಟಕದ ಕರಾವಳಿ ಭಾಗದಲ್ಲಿ ಅಬ್ಬರಿಸುತ್ತಿದ್ದು, ರಾಜ್ಯದ ಇತರ ಭಾಗಗಳಲ್ಲಿಯೂ ಚುರುಕಾಗುತ್ತಿದೆ.

ಜೂನ್ 30ರಿಂದ ಜುಲೈ 5ರ ವರೆಗೆ ಉತ್ತರ ಕನ್ನಡ- ಉಡುಪಿ-ದಕ್ಷಿಣ ಕನ್ನಡದಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 5 ರವರೆಗೂ ಆರೆಂಜ್ ಅಲರ್ಟ್ ಕೊಡಲಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರಿ ಮಳೆ ಸಾಧ್ಯತೆ ಇದ್ದು, ಜುಲೈ 3ರಿಂದ 5 ರವರೆಗೆ ಆರೆಂಜ್‌ ಅಲರ್ಟ್ ಕೊಡಲಾಗಿದೆ. ಬೆಂಗಳೂರಲ್ಲಿ ಒಂದು ವಾರ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದಿದ್ದಾರೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜುಲೈ 1ರಿಂದ ಜೋರಾಗುವ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಮಂಗಳವಾರ ಜೂನ್ 30 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಅಲ್ಲದೆ ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಜುಲೈ 1 ಹಾಗೂ 2ರಂದು ಕರಾವಳಿ ಜಿಲ್ಲೆಗಳಲ್ಲಿ ಅತಿಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಜುಲೈ 3 ರಿಂದ 5ರ ವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಬಾರಿ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಮಲೆನಾಡು ಭಾಗಗಳಲ್ಲೂ ಅತಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಂಗಳೂರು, ಕೊಡಗು ಹಾಗೂ ಶಿವಮೊಗ್ಗಕ್ಕೂ ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಧಾರವಾಡ ಗದಗ, ಬೆಳಗಾವಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ