Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜುಲೈ 18ರ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 18ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಜುಲೈ 13ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಉಳಿದ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಉತ್ತರ ಒಳನಾಡಿನ ಬೆಳಗಾವಿ, ಗದಗ, ಬಾಗಲಕೋಟೆ, ಹಾವೇರಿ, ಧಾರವಾಡ, ಬೀದರ, ವಿಜಯಪುರ, ಕಲಬುರಗಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 14ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಬೀದರ, ಗದಗ, ವಿಜಯಪುರ, ಕಲಬುರಗಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 15ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಬೀದರ್, ಗದಗ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಹಗರದಿಂದ ಸಾಧಾರಣ ಮಳೆಯಾಗಲಿದೆ.
ಜುಲೈ 16ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.. ಹಾಸನ, ಕೊಡಗು, ಮೈಸೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಗದಗ, ಧಾರವಾಡ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಜುಲೈ 17 ರಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಗೂ ಹಾಸನ, ಕೊಡಗು, ಮೈಸೂರು, ಬೆಂಗಳೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಬೀದರ, ಗದಗ ಸೇರಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಮತ್ತು 18ರಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಗೂ ಹಾಸನ, ಕೊಡಗು, ಮೈಸೂರು, ಬೆಂಗಳೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಬೀದರ, ಗದಗ ಸೇರಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ