ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲೂ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ ಸುರಿಯುವ ಸಾಧ್ಯತೆಯಿದೆ.
ಮೇ 6 ಮತ್ತು 7ರಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಮೇ 7 ರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ಜಿಲ್ಲೆಗಳಲ್ಲಿ ಗಂಟೆಗೆ 51.5 ಮಿ.ಮೀ. ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
