Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶುಕ್ರವಾರದಿಂದ 10 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ

ಬೆಂಗಳೂರು : ಈ ಬಾರಿ ಮುಂಗಾರು ಈವರೆಗೆ ತಕ್ಕಮಟ್ಟಿಗೆ ಸಮಾಧಾನ ನೀಡಿದ್ದರೂ ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗದೇ ಕೆಲವು ಭಾಗಗಳಲ್ಲಿ ಮಳೆಯ ಕೊರತೆಯಾಗಿದೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಮಳೆ ಉತ್ತಮವಾಗಿದೆ, ಆದರೆ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಮಳೆ ಕೊರತೆ ಕಂಡುಬಂದಿದೆ. ಇದೇ ವೇಳೆ ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 21ರಿಂದ ಜುಲೈ ಮೊದಲನೇ ವಾರದವರೆಗೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಜೂನ್‌ 22ರಿಂದ ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ಮಲೆನಾಡಿನ ಘಟ್ಟಗಳ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯನ್ನು ನಿರೀಕ್ಷೆ ಮಾಡಬಹುದು ಎಂದು ಅದು ಹೇಳಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಜೂನ್ 21 ರಿಂದ ಜೂನ್ 26 ರವರೆಗೆ ವ್ಯಾಪಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೂನ್ 26 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಜೂನ್ 22 ಮತ್ತು 23 ರಿಂದ ಮಳೆಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಯಿದೆ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಜೂನ್ 21ರಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ