Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಮುಂಗಾರು ಮಳೆಯ ಕೊರತೆಯ ನಡುವೆ ಕರ್ನಾಟಕದಾದ್ಯಂತ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇತ್ತೀಚಿನ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 30ರ ನಂತರ ರಾಜ್ಯದ ಹಲವೆಡೆ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಜೂನ್ 29, 30ರವರೆಗೆ ಭಾರಿ ಮಳೆಯಾಗಲಿದ್ದು, ಜೊತೆಗೆ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜುಲೈ 1 ರಿಂದ ಜುಲೈ 3ರವರೆಗೂ ಸತತವಾಗಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ ಕೊನೆಯ ವಾರ ಹಾಗೂ ಜುಲೈ ಮೊದಲ ವಾರದಲ್ಲಿ ಮಳೆ ಹೆಚ್ಚಾಗಲಿದೆ. ಜೂನ್  29ರಂದು ಗುಡುಗು ಹಾಗೂ ಸಿಡಿಲಿನ ಮುನ್ಸೂಚನೆ (ಗ್ರೀನ್ ಅಲರ್ಟ್) ನೀಡಲಾಗಿದೆ. ಜೂನ್ 30 ರಿಂದ ಜುಲೈ 3ರವರೆಗೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಈ ವೇಳೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!