Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವಾರ ಕಾಲ ಭಾರೀ ಮಳೆ ಸಾಧ್ಯತೆ : ಮುನ್ಸೂಚನೆ

ಮಂಗಳೂರು : ಕರ್ನಾಟಕದ ಕರಾವಳಿ ಭಾಗಗಳಲ್ಲಿ ಸುಮಾರು ಒಂದು ವಾರದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಯಾದ್ಯಂತ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಇಲಾಖೆ ಸೂಚಿಸಿದೆ.

ನೈಋತ್ಯ ಮುಂಗಾರು ರಾಜ್ಯದಲ್ಲಿ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.  ಮಳೆ ತೀವ್ರತೆ ಮುಂದುವರಿಯುವ ಸಾಧ್ಯತೆ ಇದ್ದು ಅಪಾಯದ ಪ್ರದೇಶಗಳಲ್ಲಿ ವಾಸಿಸುವವರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಐಎಂಡಿ ಸಲಹೆ ನೀಡಿದೆ. ಒಂದು ವಾರ ಕಾಲ ಕೇರಳದ ಹಲವು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಎರ್ನಾಕುಳಂ, ಇಡುಕ್ಕಿ, ಕಣ್ಣೂರು, ಕಾಸರಗೋಡು, ಕೋಟಾಯಂ, ಕೊಚ್ಚಿನ್‌, ಮಾಹೆ, , ಪಾಲಕ್ಕಾಡು, ತ್ರಿಶೂರ್ ಹಾಗೂ ವಯನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!