Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇನ್ಮುಂದೆ ಒಂದನೇ ತರಗತಿಗೆ ಆರು ವರ್ಷ ಆದರೆ ಮಾತ್ರ ಸೇರ್ಪಡೆ

ಬೆಂಗಳೂರು: ಸರಕಾರಗಳು ಜಾರಿಗೊಳಿಸುವ ಕೆಲ ಕಾನೂನುಗಳು ಜನರ ಪಾಲಿಗೆ ಗೊಂದಲಮಯವಾಗುತ್ತಿವೆ. ಸರಕಾರಗಳು ಬದಲಾದಂತೆಲ್ಲ ಶೈಕ್ಷಣಿಕ ನೀತಿ ನಿಯಮಗಳು ಆಗಾಗ ಬದಲಾವಣೆಗೊಂಡು ಜನ ಸಮಸ್ಯೆ ಎದುರಿಸುವಂತಾಗಿದೆ.

ಹೊಸ ವರ್ಷಾರಂಭವಾಗಿದ್ದರೂ, ಶೈಕ್ಷಣಿಕ ವರ್ಷಾರಂಭಕ್ಕೆ ಇನ್ನೂ ಕೆಲ ತಿಂಗಳಿದೆ. ಆದರೆ, ಖಾಸಗಿ ಶಾಲೆಗಳಲ್ಲಿ 2025-26ನೇ ಸಾಲಿಗೆ ಪ್ರವೇಶಾತಿ ಈಗಾಗಲೇ ಆರಂಭವಾಗಿದೆ.

ಇಷ್ಟು ದಿನಗಳವರೆಗೆ ಒಂದನೇ ತರಗತಿ ದಾಖಲಾಗಲು ಮಗುವಿಗೆ ಕನಿಷ್ಠ 5 ವರ್ಷ 5 ತಿಂಗಳು ವಯಸ್ಸಾಗಿರಬೇಕಾಗಿತ್ತು. ಆದರೆ, 2025-26ನೇ ಸಾಲಿಗೆ ಒಂದನೇ ತರಗತಿಗೆ ಮಗುವನ್ನು ದಾಖಲು ಮಾಡಬೇಕಾದಲ್ಲಿ ಕನಿಷ್ಠ 6 ವರ್ಷ ವಯಸ್ಸಾಗಿರಬೇಕು. ಕೇಂದ್ರ ಸರ್ಕಾರ ಕೆಲ ವರ್ಷಗಳ ಹಿಂದೆಯೇ ಈ ನಿಯಮ ಜಾರಿಗೊಳಿಸಿದ್ದರೂ, ರಾಜ್ಯ ಸರ್ಕಾರ ಮುಂದೂಡುತ್ತಲೇ ಬಂದಿತ್ತು. 2025-26ನೇ ಸಾಲಿನಿಂದ ಜಾರಿಗೊಳಿಸುವುದಾಗಿ ಎರಡು ವರ್ಷಗಳ ಹಿಂದೆ ತಿಳಿಸಿತ್ತು.

ಅದರಂತೆ, ಕಳೆದ ವರ್ಷ ಎಲ್‌ಕೆಜಿ ಪ್ರವೇಶ ಬಯಸುವ ಮಕ್ಕಳಿಗೆ 4 ವರ್ಷವಾಗಿರಬೇಕು ಎಂದು ಅಧಿಸೂಚನೆ ಹೊರಡಿಸಿತ್ತು. ಅಂದರೆ ಈ ವರ್ಷ ಒಂದನೇ ತರಗತಿ ತಲುಪುವ ಹೊತ್ತಿಗೆ ಆ ಮಕ್ಕಳಿಗೂ ಆರು ವರ್ಷ ವಯಸ್ಸಾಗಿರಬೇಕು ಎಂಬುದು ಉದ್ದೇಶವಾಗಿತ್ತು. ಈ ಶೈಕ್ಷಣಿಕ ವರ್ಷದಿಂದ 6 ವರ್ಷ ಕಡ್ಡಾಯ ಆದೇಶವನ್ನು ಶಿಕ್ಷಣ ಇಲಾಖೆ ಇನ್ನಷ್ಟೇ ಹೊರಡಿಸಬೇಕಾಗಿದ್ದರೂ, ಅದಕ್ಕಾಗಿ ಭೂಮಿಕೆಯನ್ನು ಈಗಾಗಲೇ ಶಿಕ್ಷಣ ಇಲಾಖೆ ಸಜ್ಜುಗೊಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ