Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಇನ್ಮುಂದೆ ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂದು ಇತ್ತೀಚೆಗೆ ಸಚಿವ ಸಂಪುಟವು ನಿರ್ಧಾರ ಕೈಗೊಂಡ ನಂತರ ಈಗ ರಾಜ್ಯ ಸರ್ಕಾರವು ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಆದೇಶ ಜಾರಿಯಾಗಲಿದೆ.

ರಾಜ್ಯದ ಸಚಿವ ಸಂಪುಟದ ತೀರ್ಮಾನದಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಯಾವುದೇ ಖಾಸಗಿ ಸಂಘಟನೆಯಾಗಲಿ ಅಥವಾ ಸಂಘ-ಸಂಸ್ಥೆಗಳಾಗಲಿ ಸಾರ್ವಜನಿಕ ಆಸ್ತಿ, ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ. (ಫಿಡಿಎಫ್‌ ನೋಡಲು Order on usage og Government propery by private organisation ಇಲ್ಲಿ ಕ್ಲಿಕ್‌ ಮಾಡಬಹುದು)

ಸರ್ಕಾರಿ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣ: ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅನುಮತಿ ಪಡೆಯಬೇಕು. ಉದ್ಯಾನವನ, ಮೈದಾನಗಳು ಇತರೆ ತೆರೆದ ಸ್ಥಳಗಳು : ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಅನುಮತಿ ಪಡೆಯಬೇಕು. ರಸ್ತೆಗಳು, ಸರ್ಕಾರದ ಇತರೆ ಆಸ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಪೊಲೀಸ್‌ ಆಯುಕ್ತರು/ ಪೊಲೀಸ್‌ ಅಧೀಕ್ಷಕರ ಒಪ್ಪಿಗೆ ಪಡೆಯಬೇಕು ಎಂದು ಹೇಳಲಾಗಿದೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು