Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಗೋ ಬನ್ನಿ ಕನ್ನಡಮ್ಮನ ಸೇವೆಗೆ...

ಬೆಳಗಾವಿ : ಮೂಡಲಗಿ ಆರ್‌ಡಿಎಸ್‌ ಸಂಸ್ಥೆಯ ಮೈದಾನದಲ್ಲಿ ನ. 23 ಮತ್ತು 24 ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ 16 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ದತೆ ಭರದಿಂದ ಸಾಗಿದೆ. ಸಮ್ಮೇಳನದ ಯಶಸ್ಸಿಗೆ ಈ ಭಾಗದ ಕನ್ನಡ ಮನಸ್ಸುಗಳು ಸಜ್ಜಾಗಿದ್ದು ಅಭೂತಪೂರ್ವವಾಗಿ ಕನ್ನಡಮ್ಮನ ಸೇವೆ ಮಾಡಲು ಇದೀಗ ತುದಿಗಾಲಲ್ಲಿ ನಿಂತಿದ್ದಾರೆ.

ಸಮ್ಮೇಳನಾಧ್ಯಕ್ಷರ ನೇತೃತ್ವದಲ್ಲಿ ಭುವನೇಶ್ವರಿಯ ಮೆರವಣಿಗೆಯು ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಕಲ್ಮೇಶ್ವರ ವೃತ್ತದ ಮೂಲಕ, ಆರ್‌ಡಿಎಸ್‌ ಕಾಲೇಜು ವರೆಗಿನ ರಸ್ತೆ ದುರಸ್ತಿ ಮಾಡಲಾಗಿದೆ.  ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಲುವಾಗಿ ಪುರಸಭೆಯ ವಿವಿಧ ಅನುದಾನದ ಅಡಿಯಲ್ಲಿ ರೂ. 1.14 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಿಸುತ್ತಿದ್ದಾರೆ. ಈ ಭಾಗದಲ್ಲಿ ವಿಶೇಷವಾಗಿ ನಡೆಯುತ್ತಿರುವ ಸಮ್ಮೇಳನವನ್ನು ಅತ್ಯಂತ ಅಚ್ಚುಕಟ್ಟು ಹಾಗೂ ಮಾದರಿ ರೀತಿಯಲ್ಲಿ ನಡೆಸಲು ಸಿದ್ದತೆ ನಡೆದಿದೆ.

ಮೆರವಣಿಗೆ ಉದ್ಘಾಟನೆ: ನ. 23ರಂದು ಬೆಳಿಗ್ಗೆ 8.30ಕ್ಕೆ
ಶಿವಾಪುರದ ಅಡವಿಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಮ್ಮೇಳನ ನೆರವೇರಲಿದೆ. ವಿಧಾನ ಪರಿಷತ್‌ ಸದಸ್ಯ ಲಖನ್ ಜಾರಕಿಹೊಳಿ, ಪುರಸಭೆ ಅಧ್ಯಕ್ಷೆ ಖುರ್ಷದಾ ಬೇಗಂ ನದಾಫ್, ಉಪಾಧ್ಯಕ್ಷೆ ಭೀಮವ್ವಾ ಪೂಜೇರಿ ಉದ್ಘಾಟಿಸುವರು. ತಾಲೂಕು ಆಡಳಿತದ ಅಧಿಕಾರಿಗಳು, ಪುರಸಭೆ ಸದಸ್ಯರು, ತಾಲೂಕಿನ ಎಲ್ಲ ಗ್ರಾಮ ಪಂಚಾಯ್ತಿಯ ಸದಸ್ಯರು ಭಾಗವಹಿಸುವರು.

ಸಮ್ಮೇಳನದ ಉದ್ಘಾಟನೆ: ನ. 23ರಂದು ಬೆಳಿಗ್ಗೆ 11ಕ್ಕೆ
ಮೂಡಲಗಿ ಶಿವಬೋಧರಂಗ
ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ, ಶ್ರೀಧರಬೋಧ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಚಿಂತಕ ಪ್ರೊ.ಚಂದ್ರಶೇಖರ ಅಕ್ಕಿ ಸಮ್ಮೇಳನಾಧ್ಯಕ್ಷತೆ ವಹಿಸುವರು. ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಕೋರೆ ಧ್ವಜ ಹಸ್ತಾಂತರಿಸುವರು. ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ ಜೋಶಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆ ವಹಿಸುವರು. ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ, ಸಂಸದರಾದ ಜಗದೀಶ ಶೆಟ್ಟರ, ವಿಶ್ವೇಶ್ವರ ಕಾಗೇರಿ, ಶಾಸಕ ರಮೇಶ ಜಾರಕಿಹೊಳಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಾಹಿತಿ ಬಾಳಾಸಾಹೇಬ ಲೋಕಾಪುರ ಭಾಗವಹಿಸುವರು. ಜಿಲ್ಲೆಯ ಎಲ್ಲ ಶಾಸಕರು ಅತಿಥಿಗಳಾಗಿ ಪಾಲ್ಗೊಳ್ಳುವರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಆಶಯ ನುಡಿಯನ್ನಾಡುವರು. ಮೂಡಲಗಿ ತಾಲೂಕು ಘಟಕದ ಅಧ್ಯಕ್ಷ ಸಂಜಯ ಶಿಂಧಿಹಟಿ, ಪ್ರಾಸ್ತಾವಿಕ ಮಾತನಾಡುವರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ