Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

PUC ಫಲಿತಾಂಶ : ಟಾಪರ್ ಯಾರು? ಇಲ್ಲಿದೆ ಮಾಹಿತಿ

ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶೇ.86.48ರಷ್ಟು ದಾಖಲೆಯ ಫಲಿತಾಂಶ ಬಂದಿದೆ.
ನಗರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಶೇಕಾಡ 88.70% ಬಾಲಕಿಯರು ಉತ್ತೀರ್ಣರಾಗಿದ್ದು, ಶೇಕಾಡ 83.65% ಬಾಲಕರು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎಂದು ತಿಳಿಸಿದರು.
ಕಲಾ ವಿಭಾಗದಲ್ಲಿ 98,310 (72.86%) ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 1,82,317(88.04%) ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 2,66,071(86.48%) ಉತ್ತೀರ್ಣರಾಗಿದ್ದಾರೆ. ಈ ಪೈಕಿ ನಗರ ವಿಭಾಗದಲ್ಲಿ 3,71,853 (85.95%) ಮಕ್ಕಳು, ಗ್ರಾಮೀಣ ವಿಭಾಗದ 1,74,845 (87.62%) ಮಕ್ಕಳು ಉತ್ತೀರ್ಣರಾಗಿದ್ದಾರೆ.
1,70,529 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ , 2,95,385 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ , 63,957 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ ಹಾಗೂ 16,827 ಮಕ್ಕಳು ಜಸ್ಟ್‌ ಪಾಸ್‌ ಆಗಿದ್ದಾರೆ. 5,577 ವಿದ್ಯಾರ್ಥಿಗಳು 35% ನಿಂದ 33% ಪಾಸಿಂಗ್ ಅಂಕದಿಂದ ಪಾಸ್ ಆಗಿದ್ದಾರೆ. ಎಂದು ಮಾಹಿತಿ ನೀಡಿದರು.


ರಾಜ್ಯದ ಟಾಪರ್ಸ್‌
ವಿಜ್ಞಾನ ವಿಭಾಗ
ದಕ್ಷಿಣ ಕನ್ನಡದ ಕಾವೂರಿನ ದಿ ಲರ್ನಿಂಗ್​​ ಸೆಂಟರ್​​ ಪಿಯು ಕಾಲೇಜಿನ ಪ್ರಿನ್ಸಿಲ್ಲಾ 600ಕ್ಕೆ 599 ಅಂಕ ಪಡೆಯುವ ಮೂಲಕ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
600ಕ್ಕೆ 599 ಅಂಕ ಪಡೆದ ವಿದ್ಯಾರ್ಥಿಗಳು- 1
600ಕ್ಕೆ 598 ಅಂಕ ಪಡೆದ ವಿದ್ಯಾರ್ಥಿಗಳು-12
600ಕ್ಕೆ 597 ಅಂಕ ಪಡೆದ ವಿದ್ಯಾರ್ಥಿಗಳು-19
ವಾಣಿಜ್ಯ ವಿಭಾಗ-
ದಿಶಾ – 600ಕ್ಕೆ 600 ಅಂಕ- ಆಳ್ವಾಸ್ ಕಾಲೇಜ್, ಮೂಡಬಿದ್ರೆ
ಅದಿತಿ ಬಾಪು – 600ಕ್ಕೆ 600 ಅಂಕ-ಜೈನ್ ಕಾಲೇಜ್, ಬೆಂಗಳೂರು
600ಕ್ಕೆ 600 ಅಂಕ ಪಡೆದ ವಿದ್ಯಾರ್ಥಿಗಳು- 2
600ಕ್ಕೆ 599 ಅಂಕ ಪಡೆದ ವಿದ್ಯಾರ್ಥಿಗಳು- 2
600ಕ್ಕೆ 598 ಅಂಕ ಪಡೆದ ವಿದ್ಯಾರ್ಥಿಗಳು- 6
ಕಲಾ ವಿಭಾಗ
ಸಂಗೀತಾ – 600ಕ್ಕೆ 598 ಅಂಕ-ಇಂದು ಪಿಯು ಕಾಲೇಜ್, ಕೊಟ್ಟೂರು (ವಿಜಯನಗರ)
ಅರ್ಚನಾ – 600ಕ್ಕೆ 598 ಅಂಕ-ಇಂದು ಪಿಯು ಕಾಲೇಜ್, ಕೊಟ್ಟೂರು (ವಿಜಯನಗರ)
600ಕ್ಕೆ 598 ಅಂಕ ಪಡೆದ ವಿದ್ಯಾರ್ಥಿಗಳು- 3
600ಕ್ಕೆ 595 ಅಂಕ ಪಡೆದ ವಿದ್ಯಾರ್ಥಿಗಳು- 5
600ಕ್ಕೆ 594 ಅಂಕ ಪಡೆದ ವಿದ್ಯಾರ್ಥಿಗಳು- 8

ಜಿಲ್ಲಾವಾರು ಫಲಿತಾಂಶ
ಈ ಬಾರಿಯ ಫಲಿತಾಂಶದಲ್ಲಿ ಶೇಕಡಾ 96.39 ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಮತ್ತೆ ಪ್ರಥಮ ಸ್ಥಾನ ಪಡೆದುಕೊಂಡರೆ, ಉತ್ತರ ಕನ್ನಡ ಜಿಲ್ಲೆ ಶೇಕಡಾ 96.35 ಫಲಿತಾಂಶದೊಂದಿಗೆ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳು ಕೊನೆಯ ಎರಡು ಸ್ಥಾನಗಳಲ್ಲಿವೆ.
ಜಿಲ್ಲಾವಾರು ಫಲಿತಾಂಶ
ಉಡುಪಿ – 96.39%
ದಕ್ಷಿಣ ಕನ್ನಡ – 96.35%
ಕೊಡಗು – 92.34%
ವಿಜಯಪುರ – 92%
ಉತ್ತರ ಕನ್ನಡ – 91.78%
ಬೆಂಗಳೂರು ಗ್ರಾಮಾಂತರ – 91%
ಚಿಕ್ಕಮಗಳೂರು – 90.80%
ಬೆಂಗಳೂರು ದಕ್ಷಿಣ – 90.55%
ಚಿಕ್ಕಬಳ್ಳಾಪುರ – 90.24%
ಬೆಂಗಳೂರು ಉತ್ತರ – 90.05%
ಹಾಸನ – 89.71%
ಮಂಡ್ಯ – 88.85%
ರಾಮನಗರ – 87.90%
ಕೋಲಾರ – 87.38%
ಶಿವಮೊಗ್ಗ – 87.62%
ತುಮಕೂರು – 86.89%
ಕೊಪ್ಪಳ – 86.80%
ಚಾಮರಾಜನಗರ – 84.68%
ಮೈಸೂರು – 84.80%
ಬೀದರ್ – 84.61%
ಬಾಗಲಕೋಟೆ – 84.12%
ಹಾವೇರಿ – 84.11%
ಧಾರವಾಡ – 83.31%
ಚಿಕ್ಕೋಡಿ – 83.10%
ದಾವಣಗೆರೆ – 81.99%
ಬೆಳಗಾವಿ – 80.32%
ಚಿತ್ರದುರ್ಗ – 79.12%
ಬಳ್ಳಾರಿ – 78.69%
ಕಲಬುರಗಿ – 76.97%
ಗದಗ – 76.65%
ರಾಯಚೂರು – 74.09%
ಯಾದಗಿರಿ – 71.21%
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ