Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿಡ್ಕಲ್: ಕೇವಲ ಅರ್ಧ ಟಿಎಂಸಿ ನೀರು ಬಳಕೆ: ಎಂ ಬಿ ಪಾಟೀಲ

 

ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿರುವ ಹಿಡಕಲ್ ಅಣೆಕಟ್ಟೆಯಿಂದ ಪಕ್ಕದ ಹುಬ್ಬಳ್ಳಿ- ಧಾರವಾಡದ ಕೈಗಾರಿಕಾ ಪ್ರದೇಶಗಳಿಗೆ ನಾವು ಬಳಸುತ್ತಿರುವುದು ಕೇವಲ 0.58 ಟಿಎಂಸಿ ಅಡಿ ನೀರಷ್ಟೆ. ಈ ವಿಚಾರದಲ್ಲಿ ವಿರೋಧ ಸರಿಯಲ್ಲ. ಕೈಗಾರಿಕೆಗಳು ಬೆಳೆಯಬೇಕು ಎಂದರೆ ನೀರನ್ನು ಕೊಡಬೇಕಾದ್ದು ಸರಕಾರದ ಮೂಲಭೂತ ಕರ್ತವ್ಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, 'ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದ ನ್ಯಾಯಾಧೀಕರಣ ತೀರ್ಪಿನಲ್ಲಿ ಕೈಗಾರಿಕಾ ಬೆಳವಣಿಗೆ ಸಲುವಾಗಿಯೇ ಹಿಡಕಲ್ ಜಲಾಶಯದಿಂದ 4 ಟಿಎಂಸಿ ಅಡಿ ನೀರು ಹಂಚಿಕೆ ಮಾಡಲಾಗಿದೆ. ಇದರಲ್ಲಿ ನಾವು ಕೇವಲ ಪ್ರತಿ ನಿತ್ಯ 45 ದಶ ಲಕ್ಷ ಲೀಟರ್ (0.58 ಟಿಎಂಸಿ) ನೀರು ಮಾತ್ರ ಬಳಸಲು ತೀರ್ಮಾನಿಸಿದ್ದೇವೆ. ಇದರಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ತೊಂದರೆ ಆಗುವಂಥ ಯಾವ ಅಂಶವೂ ಇಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಸರಕಾರವೇನೂ ಹಿಡಕಲ್ ಅಣೆಕಟ್ಟೆಯಿಂದ ನೀರು ಕೊಡಲು ಮುಂದಾಗಿಲ್ಲ. ಕೆಳಭಾಗದ ನದಿಯಿಂದ ಈ ನೀರನ್ನು ಹುಬ್ಬಳ್ಳಿ-ಧಾರವಾಡದ ಕೈಗಾರಿಕಾ ಪ್ರದೇಶಗಳಿಗೆ ಪೂರೈಸುತ್ತೇವೆ. ನೆರೆಹೊರೆಯ ಜಿಲ್ಲೆಗಳ ಜನರ ನಡುವೆ ಪರಸ್ಪರ ಅನ್ಯೋನ್ಯತೆ ಇರಬೇಕು ಎಂದು ಅವರು ಹೇಳಿದ್ದಾರೆ.

ಹಿಡಕಲ್ ಜಲಾಶಯದಿಂದ ಈಗ ಕೃಷಿ ಭೂಮಿಗೆ ಹರಿಸುತ್ತಿರುವ ನೀರಿನ ಪ್ರಮಾಣ ಅಬಾಧಿತವಾಗಿ ಇರಲಿದೆ. ಕುಡಿಯುವ ನೀರಿಗೂ ತೊಂದರೆ ಆಗುವುದಿಲ್ಲ. ಯೋಜನೆಯ ವಿರುದ್ಧ ಮಾತನಾಡುತ್ತಿರುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವರು ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ