Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿಜಾಬ್ ವಾಪಾಸ್ : ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಲಾಭ ಪಡೀತಿಲ್ವಾ? ಸಿಎಂ ಪ್ರಶ್ನೆ

 

ಮೈಸೂರು :
ಹಿಜಾಬ್‌ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಹಿಜಾಬ್‌ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್‌ ಪಡೆಯಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಾರ್ವಜನಿಕರಿಂದ ಬಂದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನೋ ಹಿಜಾಬ್, ಎಲ್ಲರು ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ. ಡ್ರೆಸ್, ಊಟ ಮಾಡುವುದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿ ಪಡಿಸಲಿ. ನೀನು ಯಾವ್ ಡ್ರೆಸ್‌ ಹಾಕಿಕೊಳ್ಳುತ್ತೀಯಾ ಹಾಕಿಕೋ. ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು. ನಾನು ಊಟ ಮಾಡುವುದು ನನ್ನ ಹಕ್ಕು. ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ. ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತೆ. ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಇರಬೇಡಿ ಎಂದರು.

ನಾವು ಎಲ್ಲ ಜಾತಿ, ಎಲ್ಲಾ ಧರ್ಮದವರಿಗೆ ಮಾತ್ರವಲ್ಲ ಎಲ್ಲಾ ಪಕ್ಷದವರಿಗೂ ಅನುಕೂಲ ಆಗುವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಬಿಜೆಪಿಯವರು 10 ಕೆಜಿ ಅಕ್ಕಿ ಪಡೆಯುತ್ತಿಲ್ಲವಾ ? ಬಿಜೆಪಿಯವರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿಲ್ಲವೇ ? ಬಿಜೆಪಿಯವರು ಗೃಹಜ್ಯೋತಿ, ಗೃಹಲಕ್ಷ್ಮಿ ಯ ಹಣ ಪಡೆಯುತ್ತಿಲ್ಲವೇ ? ನಮ್ಮ ಗ್ಯಾರಂಟಿ ಸ್ಕೀಂ ಗಳ ಲಾಭ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಸುಳ್ಳು ಹೇಳುವವರ, ನಮ್ಮ ಸರ್ಕಾರದ ಲಾಭ ಪಡೆದೂ ನಕ್ರಾ ಆಡುವವರ ಜತೆ ಹೋಗಬೇಡಿ ಎಂದು ಸಿದ್ದರಾಮಯ್ಯ ಕಿವಿಮಾತು ಹೇಳಿದರು.

ಉಡುಪು ಅವರವರ ಇಷ್ಟ: ಹಿಜಾಬ್ ನಿಷೇಧ ವಾಪಾಸ್ ಗೆ ಹೇಳಿದೀನಿ..
ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದೀನಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

 

ಹಣವಂತರು, ಬಲಾಡ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.

ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ.
ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು ಎಂದು ಕಿವಿಮಾತು ಹೇಳಿದರು.

ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.

ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು ಎಂದರು.

ಚಾಳಿಬಿದ್ದ ಅಪರಾಧಿಗಳ ಮೇಲೆ ತೀವ್ರ ನಿಗಾ ಇಡಬೇಕು. ರೌಡಿಗಳ ಚಲನ ವಲನದ ಬಗ್ಗೆ ಠಾಣಾಧಿಕಾರಿಗಳಿಗೆ, ಠಾಣೆಯ ಸಿಬ್ಬಂದಿಗೆ ಮಾಹಿತಿ ಇರಬೇಕು ಎಂದು ಸೂಚಿಸಿದರು.

ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಮುಖ್ಯ ಅತಿಥಿಗಳಾಗಿದ್ದರು.

ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಆಶ್ರಯ ಸಮಿತಿ ಅಧ್ಯಕ್ಷರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ