ಬೆಳಗಾವಿ: ಮಹಾರಾಷ್ಟ್ರದಲ್ಲಿ ಜೋರು ಮಳೆ ಸುರಿಯುತ್ತಿದೆ. ಮಂಗಳವಾರ ರಾತ್ರಿ ಅಂಬೋಲಿ ಘಾಟ್ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಬೆಳಗಾವಿ-ವೆಂಗುರ್ಲಾ ರಾಜ್ಯ ಹೆದ್ದಾರಿ ಮೇಲೆ ಬಂಡೆ ಉರುಳಿದೆ. ಮಹಾರಾಷ್ಟ್ರ ಸಾರಿಗೆ ಬಸ್ ಮತ್ತು ಕಾರು ದಾಟಿ ಹೋಗುವ ಸಂದರ್ಭದಲ್ಲಿ ಬಂಡೆಗಳು ಬಿದ್ದಿದೆ. ತಕ್ಷಣ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಕೊನೆಗೆ ಜೆಸಿಬಿ ಮೂಲಕ ಬಂಡೆಗಳನ್ನು ತೆರವು ಮಾಡಲಾಗಿದೆ.