Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗುಡ್ಡಕುಸಿತ : ಸಂಚಾರ ಮಾರ್ಗ ಬದಲಾವಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿವಸಗಳಿಂದ ಸುರಿಯುತ್ತಿದ್ದ ಭಾರಿ ಮಳೆಯಿಂದ ಆಗುತ್ತಿರುವ ಗುಡ್ಡಕುಸಿತ ಹಿನ್ನೆಲೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಅಂಕೋಲಾ-ಕಾರವಾರ ಮತ್ತು ಶಿರಸಿ-ಕುಮಟಾ ನಡುವೆ ಸಂಚಾರ ನಿಷೇಧಿಸಲಾಗಿದೆ. ಹೀಗಾಗಿ ಪರ್ಯಾಯ ಮಾರ್ಗ ಬಳಸುವಂತೆ ಪೊಲೀಸ್ ಅಧೀಕ್ಷಕ ಎಂ.ನಾರಾಯಣ ತಿಳಿಸಿದ್ದಾರೆ.

ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತವಾಗಿ ವಾಹನಗಳು ಹಾಗೂ ವಾಸ್ತವ್ಯದ ಮನೆ ನದಿಯ ಪಾಲಾಗಿವೆ. ಆಸ್ತಿ-ಪಾಸ್ತಿ ಹಾಗೂ ಜೀವ ಹಾನಿ ಸಂಭವಿಸಿವೆ. ಅಲ್ಲದೇ ಭಾರಿ ಪ್ರಮಾಣದಲ್ಲಿ ಮಣ್ಣು ರಸ್ತೆಯ ಮೇಲೆ ಬಿದ್ದಿವೆ. ಮಣ್ಣು ತೆರವು ಕಾರ್ಯ ಮುಂದುವರಿದಿದ್ದು, ತಾತ್ಕಾಲಿಕವಾಗಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಪರ್ಯಾಯ ಮಾರ್ಗವಾಗಿ ಈ ಕೆಳಗಿನ ಮಾರ್ಗಗಳಲ್ಲಿ ಸಾರ್ವಜನಿಕರು ಸಂಚರಿಸಬಹುದಾಗಿದೆ.

೧. ಯಲ್ಲಾಪುರದಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳಿಗೆ ಬಾಳೆಗುಳಿ ಕ್ರಾಸದಿಂದ-ಹೊಸ ಕಂಬಿ ಹಿಲ್ಲೂರು- ಮಾದನಗೇರಿ ಕ್ರಾಸ್-ಕುಮಟಾ ಮುಖಾಂತರ ಮಂಗಳೂರಿಗೆ ಪ್ರಯಾಣಿಸಬಹುದಾಗಿದೆ.
೨. ಭಟ್ಕಳದಿಂದ ಕಾರವಾರಕ್ಕೆ ಬರುವ ವಾಹನಗಳು ಕುಮಟಾ- ಮಾದನಗೇರಿ ಕ್ರಾಸ್‌ದಿಂದ – ಹಿಲ್ಲೂರು- ಹೊಸಕಂಬಿ ಬಾಳೆಗುಳಿ ಮುಖಾಂತರ ಕಾರವಾರಕ್ಕೆ ಪ್ರಯಾಣಿಸಬಹುದಾಗಿದೆ.

ಶಿರಸಿ-ಕುಮಟಾ ಸಂಚಾರಕ್ಕೂ ಪರ್ಯಾಯ ಮಾರ್ಗ :
ಶಿರಸಿ-ಕುಮಟಾ ರಸ್ತೆ ದೇವಿಮನೆ ಮತ್ತು ರಾಗಿಹೋಸಳ್ಳಿ ಮಧ್ಯ ಗುಡ್ಡ ಕುಸಿದು ರಸ್ತೆ ಸಂಪೂರ್ಣ ಬಂದ್ ಆಗಿದೆ. ಅತಿಯಾಗಿ ಮಳೆ ಬೀಳುತ್ತಿರುವುದರಿಂದ ಮಣ್ಣನ್ನು ತೆರವು ಮಾಡಿದಷ್ಟು ಮತ್ತೆ ಗುಡ್ಡ ಕುಸಿಯತ್ತಿದೆ. ಮಳೆ ಕಡಿಮೆಯಾಗದೆ ಇದ್ದಲ್ಲಿ ಮತ್ತೆ ಹಲವು ಕಡೆಗಳಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ, ಕುಮಟಾ-ಶಿರಸಿ ರಸ್ತೆಯಲ್ಲಿ ತಾತ್ಕಾಲಿಕವಾಗಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಪರ್ಯಾಯ ಮಾರ್ಗವಾಗಿ ಈ ಕೆಳಗಿನ ಮಾರ್ಗಗಳಲ್ಲಿ ಸಾರ್ವಜನಿಕರು ಸಂಚರಿಸಬಹುದಾಗಿದೆ.
೧. ಶಿರಸಿಯಿಂದ ಕುಮಟಾಕ್ಕೆ ಹೋಗುವ ವಾಹನಗಳಿಗೆ ಯಲ್ಲಾಮರ-ಹೊಸಕಂಬಿ-ಹಿಲ್ಲೂರು ಮಾದನಗೇರಿ ಕ್ರಾಸ್‌ದಿಂದ ಕುಮಟಾಕ್ಕೆ ಸಂಚರಿಸಬಹುದಾಗಿದೆ.
೨. ಶಿರಸಿಯಿಂದ ಕಾರವಾರಕ್ಕೆ ಹೋಗುವ ವಾಹನಗಳಿಗೆ ಶಿರಸಿ-ಯಲ್ಲಾಪುರ ಮಾರ್ಗವಾಗಿ ಕಾರವಾರಕ್ಕೆ ಪ್ರಯಾಣಿಸಬಹುದಾಗಿದೆ.
೩. ಭಟ್ಕಳದಿಂದ ಶಿರಸಿ ಮಾರ್ಗವಾಗಿ ಹೋಗುವ ವಾಹನಗಳಿಗೆ ಕುಮಟಾ- ಮಾದನಗೇರಿ ಕ್ರಾಸ್‌ದಿಂದ ಹಿಲ್ಲೂರು-ಹೊಸಕಂಬಿ ಯಲ್ಲಾಪುರ ಮುಖಾಂತರ ಶಿರಸಿಗೆ ಪ್ರಯಾಣಿಸಬಹುದಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ