Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

HMPV ಅಬ್ಬರ : ಪುಟ್ಟ ಕಂದಮ್ಮಗಳಿಗೆ ರಜೆ ?

Advertisement
ಬೆಳಗಾವಿ ನೆರೆಯ ಚೀನಾದಿಂದ ಮತ್ತೊಂದು ಮಹಾಮಾರಿ ಇದೀಗ ಕರ್ನಾಟಕ ಸೇರಿದಂತೆ ದೇಶದಲ್ಲಿ ಅಬ್ಬರ ಆರಂಭಿಸಿದೆ. ಪ್ರಮುಖವಾಗಿ ಮಕ್ಕಳಲ್ಲಿ ಈ ವೈರಸ್ ಕಾಣಿಸಿಕೊಳ್ಳುತ್ತಿದೆ ಇದರಿಂದ ಪಾಲಕರು ಆತಂಕ ಪಡುವಂತಾಗಿದೆ. ಚೀನಾ ವೈರಸ್ ಕರ್ನಾಟಕದಲ್ಲೂ ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಅಂಗನವಾಡಿ, ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ಬಗ್ಗೆ ವಿಶೇಷ ಗಮನ ಹರಿಸಲು ನಿರ್ಧರಿಸಿದೆ. ತಾತ್ಕಾಲಿಕವಾಗಿ ಅಂಗನವಾಡಿ ಮತ್ತು ನರ್ಸರಿ ತರಗತಿಗಳನ್ನು ಕೆಲಕಾಲ ಮುಚ್ಚಿದರೆ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಮಕ್ಕಳಲ್ಲಿ ನೈರ್ಮಲ್ಯ ಕಾಪಾಡಲು ಇದು ಅನಿವಾರ್ಯ ಎಂಬ ಮಾತು ಕೇಳಿ ಬಂದಿದೆ. ಸರ್ಕಾರ ಸದ್ಯದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ HMP ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆಸ್ಪತ್ರೆಗೆ ಹೋಗುವವರಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಈ ಟೆಸ್ಟ್‌ಗೆ 10 ರಿಂದ 12 ಸಾವಿರ ರೂ. ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ HMP ವೈರಸ್ ಟೆಸ್ಟ್ ಮಾಡಿಸಿಕೊಳ್ಳಿ ಎನ್ನುವವರ ಮೇಲೆ ಹದ್ದಿನ ಕಣ್ಣು ಇಡಲು ನಿರ್ಧರಿಸಿದೆ. ಜ್ವರ, ಕೆಮ್ಮು ಎಂದು ಆಸ್ಪತ್ರೆಗೆ ಹೋಗುವವರು HMP ವೈರಸ್ ಟೆಸ್ಟ್ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಇಲಾಖೆ ಹೇಳಿದ್ದು, ಇಂದು ಸಂಜೆಯೊಳಗೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

ಅಂಗನವಾಡಿ ರಜೆ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ