Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿನಿಮಾ ಟಿಕೆಟ್ ದರ : ಅಧಿಸೂಚನೆ ಹೊರಡಿಸಿದ ಗೃಹ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮಲ್ಟಿಪ್ಲೆಕ್ಸ್ ಗಳು ಸೇರಿ ಎಲ್ಲ

ಚಿತ್ರ ಮಂದಿರಗಳಲ್ಲಿ ಚಲನಚಿತ್ರಗಳ ಟಿಕೆಟ್ ದರವನ್ನು (ತೆರಿಗೆ ಬಿಟ್ಟು) ಗರಿಷ್ಠ ₹200ಕ್ಕೆ ನಿಗದಿಪಡಿಸಿ ಗೃಹ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಈ ನಿಯಮ ಶುಕ್ರವಾರದಿಂದಲೇ ಜಾರಿಗೆ ಬಂದಿದೆ. ಕನ್ನಡ ಸೇರಿ ಎಲ್ಲ ಭಾಷೆಗಳ ಚಲನಚಿತ್ರಗಳಿಗೂ ಈ ಆದೇಶ ಅನ್ವಯವಾಗಲಿದೆ. ಆದರೆ, 75 ಅಥವಾ ಅದಕ್ಕಿಂತ ಕಡಿಮೆ ಆಸನಗಳನ್ನು ಹೊಂದಿರುವ ಪ್ರೀಮಿಯಂ ಸೌಲಭ್ಯಗಳನ್ನು ಒಳಗೊಂಡ ಮಲ್ಟಿಪ್ಲೆಕ್ಸ್‌ಗಳಿಗೆ ಈ ನಿಯಮದಿಂದ ವಿನಾಯ್ತಿ ನೀಡಲಾಗಿದೆ.

ಯಾವುದೇ ಭಾಷೆಯ ಚಿತ್ರವಾದರೂ ಸರಿ ಗರಿಷ್ಠ ದರ ₹200 ದಾಟುವಂತಿಲ್ಲ. ಟಿಕೆಟ್ ಮೇಲೆ ಶೇ 18ರಷ್ಟು ತೆರಿಗೆ ಇರುತ್ತದೆ. ಚಿತ್ರಮಂದಿರದಲ್ಲಿ ಎರಡು ಅಥವಾ ಮೂರು ಕ್ಲಾಸ್‌ಗಳ ಆಸನ ವ್ಯವಸ್ಥೆ ಇದ್ದರೆ ಅವುಗಳ ಬೆಲೆಯೂ ₹150 ಕ್ಕಿಂತ ಕಡಿಮೆ ಆಗಲಿದೆ.

ಮಲ್ಟಿಪ್ಲೆಕ್ಸ್‌ಗಳಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರದ ಮೇಲೆ ಯಾವುದೇ ನಿಯಂತ್ರಣವಿರಲಿಲ್ಲ. ಕೆಲವು ಚಿತ್ರಗಳ ಟಿಕೆಟ್ ದರ ₹2,000-₹3000 ದಾಟುತ್ತಿತ್ತು. ತಮಿಳುನಾಡು ಮಾದರಿಯಲ್ಲೇ ಕರ್ನಾಟಕದಲ್ಲೂ ಟಿಕೆಟ್ ದರವನ್ನು ನಿಗದಿ ಮಾಡಬೇಕು ಎಂಬುದು ಕನ್ನಡ ಚಲನಚಿತ್ರ ರಂಗದ ಬಹುದಿನಗಳ ಬೇಡಿಕೆಯಾಗಿತ್ತು. ರಾಜೇಂದ್ರ ಸಿಂಗ್ ಬಾಬು ಅವರು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿದ್ದಾಗ, ಸರ್ಕಾರಕ್ಕೆ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಂದಿನ ಅಧ್ಯಕ್ಷ ಸಾ.ರಾ.ಗೋವಿಂದು ಅವರು ಕೈಜೋಡಿಸಿದ್ದರು.

'ಏಳು ವರ್ಷಗಳ ನಮ್ಮ ಹೋರಾಟ ಈಗ ಫಲ ನೀಡಿದೆ'
ಎಂದು ರಾಜೇಂದ್ರ ಸಿಂಗ್ ಬಾಬು ಪ್ರತಿಕ್ರಿಯಿಸಿದರು.

ಈ ಕುರಿತು ಮಾತನಾಡಿದ ರಾಜೇಂದ್ರಸಿಂಗ್ ಬಾಬು ಅವರು, ಈ ಹಿಂದೆಯೇ ಆದೇಶ ಆಗಿತ್ತು. ಆದರೆ, ಆಗ ಸರ್ಕಾರದಲ್ಲಿ ಕೆಲವರು ಅದಕ್ಕೆ ಹಿನ್ನಡೆ ಉಂಟು ಮಾಡಿದರು. ಅದರ ಪರಿಣಾಮ, ಆ ಆದೇಶದ ವಿರುದ್ಧ ನ್ಯಾಯಾಲಯದಿಂದ ತಡೆ ತರಲಾಯಿತು. ಕೋಟಿಗಟ್ಟಲೆ ಹಣ ಕೊಟ್ಟು ಪರ ಭಾಷಾ ಚಿತ್ರಗಳನ್ನು ಇಲ್ಲಿಗೆ ತಂದು ಕನ್ನಡಿಗರ ಹಣ ಲೂಟಿ ಮಾಡುತ್ತಿದ್ದರು. ಈಗ ಅದಕ್ಕೆ ಕಡಿವಾಣ ಬೀಳಲಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ಸಾಮಾನ್ಯ ಜನರೂ ಚಲನಚಿತ್ರಗಳನ್ನು ನೋಡಬಹುದಾಗಿದೆ' ಎಂದರು.

'ತಮಿಳುನಾಡು, ಆಂಧ್ರದಲ್ಲೂ ಟಿಕೆಟ್ ದರ ಕಡಿಮೆ ಇದೆ. ಅಲ್ಲಿ ತೆರಿಗೆಯೂ ಸೇರಿ ಟಿಕೆಟ್ ದರ ₹150ರಿಂದ ₹200ರ ಒಳಗೆ ಇದೆ. ಕರ್ನಾಟಕದಲ್ಲಿ ಮಾತ್ರ ಅತ್ಯಂತ ದುಬಾರಿ ಆಗಿತ್ತು. ಇದರಿಂದ ಕನ್ನಡ ಚಿತ್ರಗಳ ಮೇಲೂ ಪರಿಣಾಮ ಬೀರಿತ್ತು. ಹೊಸ ಅಧಿಸೂಚನೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ' ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ