Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಸಂಪಾದಕರ ಸಭೆಯಲ್ಲಿ ರಾಜ್ಯ ಪದಾಧಿಕಾರಿಗಳ ಸನ್ಮಾನ

ಬೆಳಗಾವಿ : ಬೆಳಗಾವಿ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಭೆ ನಡೆಯಿತು.

ಬೆಳಗಾವಿಯ ಸನ್ಮಾನ ಡಿಲಕ್ಸ್ ಹೋಟೆಲಿನಲ್ಲಿ ನಡೆದ ಈ ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಅಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ, ರಾಜ್ಯ ಉಪಾಧ್ಯಕ್ಷ ಮಂಜುನಾಥ ಅಬ್ಬಿಗೇರಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಚೆನ್ನಬಸವ ಅವರನ್ನು ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಎ.ಸಿ. ತಿಪ್ಪೇಸ್ವಾಮಿ ಅವರು ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಮಸ್ಯೆಗಳ ಪರಿಹಾರಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದರು.
ಉಪಾಧ್ಯಕ್ಷ ಮಂಜುನಾಥ ಅಬ್ಬಿಗೇರಿ ಮಾತನಾಡಿ, ಜಾಹೀರಾತು ನೀತಿ ಸೇರಿದಂತೆ ಇತರ ವಿಷಯಗಳ ಕುರಿತು ಮುಂದಿನ ದಿನಗಳಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ವಿವರಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಚನ್ನಬಸವ ಬಾಗಲವಾಡ ಮಾತನಾಡಿ, ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಉಳಿವು ಮತ್ತು ಬೆಳವಣಿಗೆಗಾಗಿ ಒಗ್ಗಟ್ಟಿನಿಂದ ಪ್ರಯತ್ನಿಸಬೇಕಿದೆ ಎಂದರು.
ಹಿರಿಯ ಸಂಪಾದಕ ಎಸ್. ಬಿ. ಧಾರವಾಡಕರ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದರು.
ಸಂಪಾದಕರ ಸಂಘದ ಜಿಲ್ಲಾ ಅಧ್ಯಕ್ಷ ಮುರುಗೇಶ ಶಿವಪೂಜಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿ, ಕಳೆದ 35 ವರ್ಷಗಳಲ್ಲಿ ಸಂಘ ನಡೆದು ಬಂದ ದಾರಿಯನ್ನು ವಿವರಿಸಿದರು, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಮುಚಳಂಬಿ ವಂದಿಸಿದರು.

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಬೆಂಗಳೂರು. ಈ ಸಂಘಕ್ಕೆ ಬೆಳಗಾವಿ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘವು ತನ್ನ ಸ್ವತಂತ್ರ ಅಸ್ತಿತ್ವವನ್ನು ಉಳಿಸಿಕೊಂಡು ಅಫಿಲಿಯೇಶನ್ ( ಸಂಲಗ್ನತೆ ಅಥವಾ ಸಂಯೋಜನೆ) ಹೊಂದುವ ಕುರಿತು ಇದೇ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಯಿತು.

ಅದಕ್ಕೆ ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಅಧ್ಯಕ್ಷರು, ರಾಜ್ಯ ಉಪಾಧ್ಯಕ್ಷರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ತಮ್ಮ ಒಪ್ಪಿಗೆಯನ್ನು ಸೂಚಿಸಿದರು. ನಂತರ ಬೆಳಗಾವಿ ಜಿಲ್ಲೆಯಿಂದ ರಾಜ್ಯ ಪರಿಷತ್ತಿಗೆ ಸಂಪಾದಕರಾದ ಮನೋಹರ ಕಾಲಕುಂದ್ರಿಕರ್, ಎ.ಬಿ. ಧಾರವಾಡಕರ ಮತ್ತು ಎನ್ . ಪ್ರಶಾಂತ್ ರಾವ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಹಿರೋಜಿ ಮಾವರ್ಕರ್, ಬಬಿತಾ ಪವಾರ್ , ಮಲ್ಲಿಕಾರ್ಜುನ
ಹೆಗ್ಗನಾಯಕ ಮತ್ತು ಗುರುರಾಜ ಕದಂ, ಜನಜೀವಾಳ ದಿನಪತ್ರಿಕೆಗಳ ಸಂಪಾದಕ ಶಿವರಾಯ ಏಳುಕೋಟಿ, ಹಸಿರುಕ್ರಾಂತಿ ದಿನಪತ್ರಿಕೆ ಸಂಪಾದಕ ವಿಜಯ್ ಕುಮಾರ್ ಮುಚ್ಚಳಂಬಿ, ಸಂಪಾದಕರಾದ ನಾನಪ್ಪ ಮಾವರ್ಕರ್, ಜಯಪ್ರಕಾಶ್ ಜೋಶಿ, ಮತೀನ ಧಾರವಾಡಕರ್, ರಾಜೇಂದ್ರ ಪವಾರ್ ಮತ್ತು ಚೆನ್ನಪ್ಪ ವಗ್ಗಣ್ಣವರ್ ಉಪಸ್ಥಿತರಿದ್ದು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ