Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ಕೆಲವು ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ ; ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಬಿಸಿಗಾಳಿ ಮತ್ತು ಅಧಿಕ ಆರ್ದ್ರತೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಆರ್ದ್ರತೆ ಸಹ ಹೆಚ್ಚಾಗುವುದರಿಂದ ಸೆಕೆ ಅನುಭವ ಜಾಸ್ತಿ ಆಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಗಾಳಿ ತೀವ್ರಗೊಂಡಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.
ವಿಶೇಷವಾಗಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತಾಪಮಾನವು 35 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಜನರು ಬಿಸಿಲು ಮತ್ತು ಆರ್ದ್ರತೆಯಿಂದ ತುಂಬಾ ಅಸ್ವಸ್ಥರಾಗುವ ಸಾಧ್ಯತೆ ಇದೆ. ಹೀಗಾಗಿ ಮೂರು ದಿನಗಳ ಕಾಲ ಜಿಲ್ಲೆಗಳಲ್ಲಿ ಜಾಗರೂಕತೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ತೀವ್ರ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂನೆ ನೀಡಿದೆ
ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದೆ.

ಬೆಂಗಳೂರು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ ಮತ್ತು ವಿಜಯಪುರ ಸೇರಿದಂತೆ ಹಲವು ಭಾಗಗಳಲ್ಲಿ ಶುಷ್ಕ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಕೆಲವು ಕಡೆ ಅಲ್ಪ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. .
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ