Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗಂಡ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ನೇಣಿಗೆ ಶರಣಾದ ಗೃಹಿಣಿ

ಮೋದಾಸ (ಗುಜರಾತ್): ಹೊಸ ಮೊಬೈಲ್ ಫೋನ್ ಕೊಡಿಸಲು ಪತಿ ನಿರಾಕರಿಸಿದ ಕಾರಣಕ್ಕೆ 22 ವರ್ಷದ ವಲಸೆ ಕಾರ್ಮಿಕ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್‌ನ ಮೋದಾಸದಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ.
ಮೃತ ಮಹಿಳೆಯನ್ನು ಊರ್ಮಿಳಾ ಎಂದು ಗುರುತಿಸಲಾಗಿದೆ. ಈ ದಂಪತಿ ಮೂಲತಃ ನೇಪಾಳದವರಾಗಿದ್ದು, ಜೀವನೋಪಾಯಕ್ಕಾಗಿ ಗುಜರಾತ್‌ಗೆ ಬಂದು ನೆಲೆಸಿದ್ದರು. ಮೋದಾಸದಲ್ಲಿ ಇವರು ‘ಚೈನೀಸ್ ಫುಡ್’ ವ್ಯಾಪಾರ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಕೆಲವು ದಿನಗಳ ಹಿಂದೆ ಊರ್ಮಿಳಾ ಅವರು ತಮಗೆ ಹೊಸ ಮೊಬೈಲ್ ಫೋನ್ ಕೊಡಿಸುವಂತೆ ಪತಿ ಬಳಿ ಕೇಳಿದ್ದರು ಎನ್ನಲಾಗಿದೆ. ಆದರೆ ಆರ್ಥಿಕ ಸಂಕಷ್ಟದ ಕಾರಣ ನೀಡಿ ಪತಿ ಮೊಬೈಲ್ ಕೊಡಿಸಿರಲಿಲ್ಲ.

ಇದರಿಂದ ದಂಪತಿ ನಡುವೆ ಮನಸ್ತಾಪ ಉಂಟಾಗಿತ್ತು. ಇದೇ ವಿಷಯದಿಂದ ಮನನೊಂದ ಮಹಿಳೆ, ಶನಿವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಇದೊಂದು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಘಟನೆಯ ಕುರಿತು ಎಲ್ಲಾ ಆಯಾಮಗಳಿಂದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರುನಾಡಿಗೆ ಜಲಕಂಟಕ, ಭುವಿಯೇ ತಲ್ಲಣ : ಭವಿಷ್ಯ ನುಡಿದ ಪ್ರಖ್ಯಾತ ಸ್ವಾಮೀಜಿ...!ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ...!ಕೊನೆಗೂ ಸಿಹಿಸುದ್ದಿ : ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ:  ಲಕ್ಷ್ಮೀ ಹೆಬ್ಬಾಳಕರ್ ಕೊಟ್ರು ಈ ಗುಡ್ ನ್ಯೂಸ್..!ನೈರುತ್ಯ ರೇಲ್ವೆ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆಬೆಳಗಾವಿ : 12ಕ್ಕೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಸರಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿಭತ್ಯೆ ಹೆಚ್ಚಳ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುವುದು ನಾಗರಿಕರ ಆದ್ಯ ಕರ್ತವ್ಯ : ಎ.ಎಸ್.ಪಾಶ್ಚಾಪುರೆಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್‌ ಪತ್ತೆತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣ ವಚನ