Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹುಬ್ಬಳ್ಳಿ: ಸಭಾಪತಿ ಬಸವರಾಜ ಹೊರಟ್ಟಿ ಅವರ ತೋಟದಲ್ಲಿ ಪ್ರತ್ಯಕ್ಷ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಇತ್ತೀಚೆಗೆ ಅರಣ್ಯ ಇಲಾಖೆ ಸೆರೆ ಹಿಡಿದಿತ್ತು. ಆದರೆ, ಇದರ ಬಳಿಕವೂ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಭಯವನ್ನು ಹೆಚ್ಚಿಸಿದೆ.

ಶನಿವಾರ ತಾಲೂಕಿನ ಶರೇವಾಡ ಗ್ರಾಮದ ಬಳಿ ಚಿರತೆ ಕಾಣಿಸಿಕೊಂಡ ಬೆನ್ನಲ್ಲೇ, ಇದೀಗ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ತೋಟದಲ್ಲಿ ಕಳೆದ ರಾತ್ರಿ ಚಿರತೆ ಪ್ರತ್ಯಕ್ಷವಾಗಿದೆ. ಹೊರಟ್ಟಿ ಅವರ ತೋಟದಲ್ಲಿನ ದನದ ಕೊಟ್ಟಿಗೆ ಹತ್ತಿರದ ಕಂಪೌಂಡ್ ಮೇಲೆಯೇ ಚಿರತೆ ಓಡಾಡಿರುವ ದೃಶ್ಯಗಳು ಸಿಸಿಟಿವಿ ಹಾಗೂ ಮೊಬೈಲ್ ಕ್ಯಾಮರಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಗ್ರಾಮದ ಜೈನ್ ಬಸದಿ ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆ ಎರಡು ನಾಯಿಗಳನ್ನು ಬೇಟೆಯಾಡಿದ ಮಾಹಿತಿ ಲಭ್ಯವಾಗಿದೆ. ಇದರಿಂದ ಗ್ರಾಮಸ್ಥರಲ್ಲಿ ಇನ್ನಷ್ಟು ಆತಂಕ ಉಂಟಾಗಿದೆ. ಇದೇ ವೇಳೆ, ಫೆಬ್ರವರಿ 4ರಂದು ಶರೇವಾಡ ಗ್ರಾಮದ ಬಳಿಯ ಕಲ್ಲಿನ ಕ್ವಾರಿಯಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಅಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದವು.

ಈ ಬಗ್ಗೆ ಗ್ರಾಮಸ್ಥರು ಶನಿವಾರ ಸಂಜೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು, ಶರೇವಾಡ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ರಾತ್ರಿ ವೇಳೆ ಹೊರಗೆ ಮಲಗಬಾರದು, ಒಬ್ಬರೇ ಓಡಾಡಬಾರದು ಎಂದು ಗ್ರಾಮ ಪಂಚಾಯಿತಿಗಳ ಮೂಲಕ ಡಂಗೂರ ಸಾರಿಸಿ ಎಚ್ಚರಿಕೆ ನೀಡಿದ್ದರು.

ಆದರೆ, ಈ ಎಚ್ಚರಿಕೆಯ ನಡುವೆಯೇ ಇದೀಗ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ವರೂರ ಸಮೀಪದ ಹೊರಟ್ಟಿ ಅವರ ತೋಟದ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ. ನಿವಾಸಿಗಳು ರಾತ್ರಿ ವೇಳೆ ಮನೆ ಹೊರಗೆ ಬರುವುದಕ್ಕೆ ಹೆದರುವಂತಾಗಿದೆ.

ಗೊತ್ತಿಲ್ಲ ಎಂದ ಆರ್ ಎಫ್ ಓ: ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಹಿಡಿದಿದ್ದು ನಿಜನಾ ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಮಾಡುವಂತಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಅರಣ್ಯ ಇಲಾಖೆ ಆರ್.ಎಫ್.ಓ. ಆರ್.ಎಸ್. ಉಪ್ಪಾರ, ಚಿರತೆ ವಿಡಿಯೋ ಫೇಕ್ ಎಂದು ಹೇಳಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ಸ್ಥಳೀಯರು ಶಾಶ್ವತ ಪರಿಹಾರಕ್ಕಾಗಿ ಆಗ್ರಹಿಸಿದ್ದು, ಚಿರತೆಯನ್ನು ಶೀಘ್ರವಾಗಿ ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಬೇಕೆಂದು ಒತ್ತಾಯಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ