Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೈದರಾಬಾದ್ ಇನ್ಮುಂದೆ ತೆಲಂಗಾಣಕ್ಕೆ ಮಾತ್ರ ರಾಜಧಾನಿ

 

ಹೈದರಾಬಾದ್‌: ಹೈದರಾಬಾದ್ ಜೂನ್ 2ರ ನಂತರ ತೆಲಂಗಾಣ ಹಾಗೂ ಆಂಧ್ರಪ್ರದೇಶದ ಜಂಟಿ ರಾಜಧಾನಿಯಾಗಿ ಮುಂದುವರಿಯುವುದಿಲ್ಲ. ತೆಲಂಗಾಣದ ರಾಜಧಾನಿಯಾಗಿ ಮಾತ್ರ ಇರಲಿದೆ.

ಹೈದರಾಬಾದ್ ನಗರ 10 ವರ್ಷ ಮೀರದಂತೆ ತೆಲಂಗಾಣ ಹಾಗೂ ಆಂಧ್ರಪ್ರದೇಶ ರಾಜ್ಯಗಳ ರಾಜಧಾನಿಯಾಗಿರಲಿದೆ. ಈ ವ್ಯವಸ್ಥೆ ರಾಜ್ಯ ವಿಭಜನೆಯಾದ 2014ರ ಜೂನ್ 2ರಿಂದ ಜಾರಿಗೆ ಬರಲಿದೆ ಎಂದು ಆಂಧ್ರಪ್ರದೇಶ ಪುನರ್ ರಚನೆ ಕಾಯ್ದೆ, 2014 ಸೆಕ್ಷನ್ 5ರಲ್ಲಿ ಹೇಳಲಾಗಿದೆ.

10 ವರ್ಷದ ನಂತರ, ಹೈದರಾಬಾದ್ ನಗರವು ತೆಲಂಗಾಣದ ರಾಜಧಾನಿಯಾಗಿರಲಿದೆ ಎಂದು ಇದೇ ಸೆಕ್ಷನ್ 5ರಲ್ಲಿ ಉಲ್ಲೇಖಿಸಲಾಗಿದೆ.

ಹೈದರಾಬಾದ್‌ನಲ್ಲಿರುವ ಲೇಕ್ ವ್ಯೂ ಗೆಸ್ಟ್ ಹೌಸ್ ಸೇರಿದಂತೆ ಪ್ರಮುಖ ಕಟ್ಟಡಗಳನ್ನು ಸುಪರ್ದಿಗೆ ಪಡೆಯುವಂತೆ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಈಚೆಗೆ ನಿರ್ದೇಶನ ನೀಡಿದ್ದರು. ನಗರದ ಪ್ರಮುಖ ಕಟ್ಟಡಗಳನ್ನು ಆಗ ನೂತನವಾಗಿ ಅಸ್ತಿತ್ವಕ್ಕೆ ಬಂದಿದ್ದ ಆಂಧ್ರಪ್ರದೇಶ ರಾಜ್ಯದ ಕಚೇರಿಗಳಿಗಾಗಿ 10 ವರ್ಷದ ಅವಧಿಗೆ ಹಂಚಿಕೆ ಮಾಡಲಾಗಿತ್ತು.

ಉಭಯ ರಾಜ್ಯಗಳ ನಡುವೆ ಬಗೆಹರಿಯದಿರುವ ವಿಷಯ ಕುರಿತು ವರದಿ ಸಲ್ಲಿಸುವಂತೆಯೂ ಮುಖ್ಯಮಂತ್ರಿ ರೇವಂತ ರೆಡ್ಡಿ ಸೂಚನೆ ನೀಡಿದ್ದರು.

ಜೂನ್ 2ರ ಒಳಗಾಗಿ, ಉಭಯ ರಾಜ್ಯಗಳ ನಡುವಿನ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಕಟ್ಟಡಗಳನ್ನು ಸುಪರ್ದಿಗೆ ತೆಗೆದುಕೊಳ್ಳಲು ತೆಲಂಗಾಣ ಮುಖಮಂತ್ರಿ ಯಾಕಿಷ್ಟು ಉತ್ಸಾಹ ತೋರುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಹಿರಿಯ ಪತ್ರಕರ್ತ ತೇಲಕಪಲ್ಲಿ ರವಿ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ. ಆಂಧ್ರದಲ್ಲಿ ಪೂರ್ಣ ಪ್ರಮಾಣದ ಸರ್ಕಾರ ರಚನೆ ಆಗಿರುವುದಿಲ್ಲ. ಸುಸಜ್ಜಿತ ಕಟ್ಟಡಗಳನ್ನು ಹೊಂದಿ, ಆಡಳಿತ ನಡೆಸಲು ನೂತನ ಸರ್ಕಾರಕ್ಕೆ ಸಮಯ ಬೇಕಾಗು ತ್ತದೆ' ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಹೈದರಾಬಾದ್‌ ನಗರ ಜೂನ್ 2ರಿಂದ ಅನ್ವಯವಾಗುವಂತೆ ತೆಲಂಗಾಣದ ರಾಜಧಾನಿಯಾಗಿ ಮುಂದುವರಿಯುವುದಕ್ಕೆ ಸಂಬಂಧಿಸಿದ ವಿಚಾರಗಳನ್ನು ಕುರಿತು ಚರ್ಚಿಸಲು ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಅವರು ಶನಿವಾರ ಸಂಪುಟ ಸಭೆ ಕರೆದಿದ್ದಾರೆ. ಇದೇ ವಿಚಾರವಾಗಿ ಅವರು ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯನ್ನು ಇತ್ತೀಚೆಗೆ ನಡೆಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ