Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ನಾನು ಸಹ ಕೆಎಲ್ಇ ಸಂಸ್ಥೆಯ ಹೆಮ್ಮೆಯ ವಿದ್ಯಾರ್ಥಿ: ಈ ಸಲ ನನಗೆ ಮತ ಕೊಡಿ-ಕೆಎಲ್ ಇ ಪರಿವಾರದಲ್ಲಿ ಮತಯಾಚನೆ ಮಾಡಿದ ಜಗದೀಶ ಶೆಟ್ಟರ್

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಮತ್ತು ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರು ಶುಕ್ರವಾರ ನಗರದ ಕೆ ಎಲ್ ಇ ಸಂಸ್ಥೆಯಲ್ಲಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಪರಿವಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಸಹ ಕೆಎಲ್ ಇ ಸಂಸ್ಥೆಯ ಹೆಮ್ಮೆಯ ವಿದ್ಯಾರ್ಥಿಯಾಗಿದ್ದೇನೆ. ಕೆಎಲ್ಇ ಜೊತೆ ನನಗೆ ಹಲವು ದಶಕಗಳಿಂದ ನಂಟು ಇದೆ. ಹೀಗಾಗಿ ಈ ಬಾರಿ ನನಗೆ ನೀವು ದಯವಿಟ್ಟು ಮತ ನೀಡಿ ಎಂದು ಅವರು ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸತತ ಎರಡು ಸಲ ಪ್ರಧಾನಿಯಾಗಿ ದೇಶವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಅವರ ಸಮರ್ಥ ನಾಯಕತ್ವದಲ್ಲಿ ಭಾರತ ಇದೀಗ ಜಾಗತಿಕ ಪ್ರಸಿದ್ಧಿ ಪಡೆದುಕೊಂಡಿದ್ದು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನುಗುತ್ತಿದ್ದೆ. ಅವರ ಕೈಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿಗೆ ಮತ ನೀಡಿ ಎಂದು ಅವರು ಮನವಿ ಮಾಡಿದರು.

ಕೆಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ಡಾ. ಪ್ರಭಾಕರ ಕೋರೆ ಮಾತನಾಡಿ, ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಜಗದೀಶ ಶೆಟ್ಟರ್ ಅವರು ಏಳು ಸಲ ಹುಬ್ಬಳ್ಳಿ ಶಾಸಕರಾಗಿ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ ವಿಶೇಷ ಸಾಧನೆ ಮಾಡಿ ಗುರುತಿಸಿಕೊಂಡವರು. ಈ ಬಾರಿ ಬಿಜೆಪಿ ಅವರಿಗೆ ಬೆಳಗಾವಿಯಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಅವರನ್ನು ಅಭೂತಪೂರ್ವ ಅಂತರದಿಂದ ಚುನಾಯಿಸುವ ಮೂಲಕ ಬೆಳಗಾವಿ ಇತಿಹಾಸದಲ್ಲಿ ಹೊಸ ಸಾಧನೆಗೆ ಸಾಕ್ಷಿ ಆಗುವಂತೆ ಅವರಿಗೆ ನಾವೆಲ್ಲರೂ ಮತದಾನ ಮಾಡಬೇಕು ಎಂದು ಅವರು ಮನವಿ ಮಾಡಿದರು.
ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ್ ಕವಟಗಿ ಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು