Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನನಗೆ ಜಾತಿ ರಾಜಕಾರಣ ಗೊತ್ತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

 

ಬೆಂಗಳೂರು:
"ನನಗೆ ಜಾತಿ ರಾಜಕಾರಣ ಗೊತ್ತಿಲ್ಲ. ಆದ ಕಾರಣ ನನ್ನ ಕ್ಷೇತ್ರದಲ್ಲಿ ಶೇ 99 ರಷ್ಟು ಜನರ ಬೆಂಬಲ ಪಡೆದು ದಾಖಲೆ ಬರೆದಿದ್ದೇನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ವಸಂತ ನಗರದಲ್ಲಿನ ಬಂಜಾರ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು "ನಾನು ಇದುವರೆಗು ಒಂಬತ್ತು ಚುನಾವಣೆಗಳನ್ನು ಎದುರಿಸಿ ಎಂಟರಲ್ಲಿ ಗೆದ್ದಿದ್ದೇನೆ . ಎಲ್ಲಾ ಸಮುದಾಯದವರು ನನ್ನ ಪರವಾಗಿ ನಿಂತ ಕಾರಣ 1.23 ಲಕ್ಷ ಮತಗಳನ್ನು ಪಡೆಯಲು ಕಾರಣವಾಯಿತು ಎಂದರು.

"ನೀರಿನಿಂದ ಸ್ನಾನ ಮಾಡಿದವರು ಬಟ್ಟೆ ಬದಲಾಯಿಸುತ್ತಾರೆ, ಬೆವರಿನಿಂದ ಸ್ನಾನ ಮಾಡಿದವರು ಇತಿಹಾಸ ಬದಲಾಯಿಸುತ್ತಾರೆ" ಎಂದು ಬಂಜಾರರ ಕುಲಗುರು ಸೇವಾಲಾಲ್‌ ಅವರು ಹೇಳಿದ್ದಾರೆ. ಅದರಂತೆ ನಮ್ಮ ಸರ್ಕಾರ ದುಡಿಯುವ ವರ್ಗಕ್ಕೆ ಗ್ಯಾರಂಟಿ ಯೋಜನೆಗಳನ್ನು ತಂದು ಗೌರವ ನೀಡಿದೆ, ಬದಲಾವಣೆ ತರಲು ಹೊರಟಿದೆ ಎಂದು ಹೇಳಿದರು.

ಬಂಜಾರ ಸಮುದಾಯದ ಬದುಕು, ಬವಣೆ, ಸರಳ ಜೀವನವನ್ನು ಕಣ್ಣಾರೆ ಕಂಡಿದ್ದೇನೆ. ಬಂಜಾರ ಸಮುದಾಯ ಕಾಂಗ್ರೆಸ್‌ ಪಕ್ಷದ ಬೆನ್ನಿಗೆ ನಿಂತು ಅನೇಕ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದೀರಿ, ನಿಮ್ಮ ಸಮುದಾಯದ ಏಳಿಗೆಗೆ ನಮ್ಮ ಸರ್ಕಾರ ಶ್ರಮಿಸುವುದು ಎಂದು ವಾಗ್ದಾನ ನೀಡಿದರು.

ನಿಂಬೆಗಿಂ ಹುಳಿಯಿಲ್ಲ, ತುಂಬೆಗಿಂ ಕರಿದಿಲ್ಲ, ಶಂಬುಗಿಂ ದೇವರಿಲ್ಲ, ನಂಬಿಗೆಯಿಂದಧಿಕ ಗುಣವಿಲ್ಲ ದೈವವುಂ ಶುಭವಿಂದಿಲ್ಲ ಎಂದು ಸರ್ವಜ್ಞ ಹೇಳುತ್ತಾರೆ.Wish ಅಂದರೆ ನಂಬಿಕೆಗಿಂತ ಹೆಚ್ಚು ದೇವರಿಲ್ಲ, ನನ್ನ ಅನುಭವದಲ್ಲಿ ಲಂಬಾಣಿ ಸಮುದಾಯ ನಂಬಿಕೆಗೆ, ದುಡಿಮೆಗೆ ಹೆಸರಾದವರು ಎಂದರು.

ರುದ್ರಪ್ಪ ಲಮಾಣಿ ಅವರ ಜೊತೆ ಕ್ಷೇತ್ರದಲ್ಲಿ ಸಂಚಾರ ಮಾಡಿದ್ದೇನೆ, ಲಂಬಾಣಿ ಸಮುದಾಯದ ಭೂಮಿ, ತಾಂಡದ ಸಮಸ್ಯೆಗಳನ್ನು ಶ್ರೀಘ್ರ ಪರಿಹರಿಸಲಾಗುವುದು. ಕೆಲವೊಬ್ಬರು ಸಚಿವ ಸ್ಥಾನ ಸಿಗಲಿಲ್ಲ ಎಂದು ಹೇಳುತ್ತಿದ್ದರು, ಒಂದಲ್ಲ ಒಂದು ದಿನ ಅವಕಾಶ ಮನೆ ಬಾಗಿಲಿಗೆ ಬರುತ್ತದೆ. ಭೀಮಾ ನಾಯ್ಕ ಅವರು ಸೋತರು ಸಚಿವ ಸ್ಥಾನಕ್ಕಿಂತ ದೊಡ್ಡ ಹುದ್ದೆಯನ್ನು ಕೊಟ್ಟಿದ್ದೇವೆ. ಸಮುದಾಯದ ಅಭಿವೃದ್ದಿಗೆ ನಾವು ಜೊತೆಗಿರುತ್ತೇವೆ. ಡಾ. ಉಮೇಶ್‌ ಜಾದವ್‌ ಅವರು ಸ್ವಲ್ಪ ಯಾಮಾರಿದರು, ಇಲ್ಲದಿದ್ದರೆ ಒಳ್ಳೆ ಸ್ಥಾನದಲ್ಲಿ ಇರಬಹುದಿತ್ತು, ಈಗ ಆ ಚರ್ಚೆ ಬೇಡ ಎಂದು ಹೇಳಿದರು.

ಮುಖ್ಯಮಂತ್ರಿಗಳು ಲಂಬಾಣಿ, ಸಮುದಾಯಕ್ಕೆ ಪಿಎಸ್‌ಇ ಸದಸ್ಯ ಸ್ಥಾನ ನೀಡಬೇಕೆಂದು ತೀರ್ಮಾನ ಮಾಡಿದ್ದಾರೆ. ಹೆಚ್ಚಿನ ಜನರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ, ಕೆಲವರಿಗೆ ಮಾತ್ರ ಕೆಲಸ ಮಾಡುವ ಅವಕಾಶ ದೊರೆಯುತ್ತದೆ. ಯಾರಿಗೆ ದೊರೆಯುತ್ತದೆ ನೋಡೋಣ. ರಾಜಕಾರಣ ಮಾಡುವವರು ಮಾಡುತ್ತಿರುತ್ತಾರೆ. ಆದರೆ ನಾವು- ನೀವು ಒಟ್ಟಿಗೆ ಕೆಲಸ ಮಾಡಿದರೆ ಕರ್ನಾಟಕವನ್ನು ಅಭಿವೃದ್ದಿ ಪಥದ ಕಡೆಗೆ ತೆಗೆದುಕೊಂಡು ಹೋಗಬಹುದು ಎಂದು ಮನವಿ ಮಾಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ