Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾನು ಇನ್ನೂ ರಾಜೀನಾಮೆ ನೀಡಿಲ್ಲ: ವೈರಲ್ ಪತ್ರಕ್ಕೆ ಸಭಾಪತಿ ಬಸವರಾಜ್ ಹೊರಟ್ಟಿ ಸ್ಪಷ್ಟನೆ

ಹುಬ್ಬಳ್ಳಿ: ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಬೆಳಿಗ್ಗೆ ಹೇಳಿದಂತೆ ರಾಜೀನಾಮೆ ನೀಡಲು ನಿರ್ಧಾರ ಕೈಗೊಂಡಿದ್ದೇನೆ. ಆದರೆ ಇನ್ನೂ ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜೀನಾಮೆ ಪತ್ರ ತಯಾರಿಸಲಾಗಿತ್ತು. ಆ ಪತ್ರವನ್ನು ಯಾರೋ ಮೊಬೈಲ್ ನಲ್ಲಿ ಸೆರೆ ಹಿಡಿದು ಈ ರೀತಿ ಮಾಡಿದ್ದಾರೆ. ಸದನದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆ ತುಂಬಾ ನೋವಾಗಿದೆ. ಆದ್ದರಿಂದ ಸ್ನೇಹಿತರ ಹಾಗೂ ಹಿತೈಷಿಗಳ ಸಲಹೆ ಒಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

'ಸದನದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳಿಂದ ತುಂಬಾ ನೋವಾಗಿದೆ. ಈ ಸ್ಥಾನದಲ್ಲಿ ಮುಂದುವರಿಯುವುದ ರಲ್ಲಿ ಅರ್ಥ ಇಲ್ಲ ಎಂಬ ಭಾವನೆ ಬರುತ್ತಿದೆ. ಹೀಗಾಗಿ ರಾಜೀನಾಮೆ ನೀಡಲು ನಿರ್ಧಾರ ಕೈಗೊಂಡಿದ್ದೇನೆ. ಆದರೆ ಇನ್ನೂ ರಾಜೀನಾಮೆ ನೀಡಿಲ್ಲ' ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದರು.

'ರಾಜೀನಾಮೆ ಪತ್ರ ಸಿದ್ಧಪಡಿಸಲಾಗಿತ್ತು. ಆ ಪತ್ರವನ್ನು ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದು ಈ ರೀತಿ ಮಾಡಿದ್ದಾರೆ. ಪತ್ರಕ್ಕೆ ನಾನು ಸಹಿ ಮಾಡಿಲ್ಲ. ಸದನದಲ್ಲಿ ಆಗಿರುವ ಬೆಳವಣಿಗೆಗಳಿಂದ ನೊಂದಿದ್ದೇನೆ. ಆದ್ದರಿಂದ ಸ್ನೇಹಿತರ ಹಾಗೂ ಹಿತೈಷಿಗಳ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು' ಎಂದರು.

'ಸಭಾಪತಿ ಸ್ಥಾನದಲ್ಲಿ ಮುಂದುವರಿಯುವ ಬಗ್ಗೆ ಏನು ತೀರ್ಮಾನ ಕೈಗೊಳ್ಳುತ್ತೇನೆಯೋ ಗೊತ್ತಿಲ್ಲ. ಈ ಸ್ಥಾನದಲ್ಲಿರಲು ಯೋಗ್ಯನಾಗಿದ್ದೇನೋ, ಇಲ್ಲವೋ, ನನ್ನದು ಅಥವಾ ಬೇರೆಯವರ ತಪ್ಪೋ ಗೊತ್ತಿಲ್ಲ. ನಾನು ಯಾರನ್ನೂ ದೂಷಿಸುವುದಿಲ್ಲ. ಒಟ್ಟಿನಲ್ಲಿ ಈ ಸ್ಥಾನದಲ್ಲಿ ಮುಂದುವರಿಯುವುದರಲ್ಲಿ ಅರ್ಥ ಇಲ್ಲ ಎಂಬ ಭಾವನೆ ಬರುತ್ತಿದೆ' ಎಂದು ಬೇಸರ ವ್ಯಕ್ತಪಡಿಸಿದ್ದರು.

ಮೂಕಪ್ರೇಕ್ಷಕನಂತೆ ಕೂರಬೇಕಾಗಿದೆ:
'ಶಾಸಕರನ್ನು ಅಮಾನತು ಮಾಡುವುದು ಒಳ್ಳೆಯ ಸಂಪ್ರದಾಯ ಅಲ್ಲ. ವಿಧಾನ ಪರಿಷತ್‌ನಲ್ಲಿ ಅಂತಹ ತೀರ್ಮಾನ ಮಾಡಿಲ್ಲ. ಸಿ.ಟಿ ರವಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರ ಪ್ರಕರಣವನ್ನು ನನ್ನ ಅನುಭವ ಆಧರಿಸಿ ತೀರ್ಮಾನ ಮಾಡಿದ್ದೇನೆ. ವಿಧಾನ ಪರಿಷತ್ತಿನಲ್ಲಿ ಜೈಕಾರ, ಧಿಕ್ಕಾರ ಕೂಗಬಾರದು ಎಂಬ ನಿಯಮ ಇದೆ. ಇದು ಪಾಲನೆಯಾಗುತ್ತಿಲ್ಲ. ಹೀಗಾಗಿ ಮೂಕಪ್ರೇಕ್ಷಕನಂತೆ ಕೂರಬೇಕಾಗಿದೆ' ಎಂದು ಬೇಸರಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ