Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೀನು ಎಂಎಲ್‌ಎ ಇದ್ದರೆ ನಿನಗೆ ಇರಬೇಕು. ನನಗೇನಲ್ಲ : ಶಾಸಕರಿಗೆ ಬೈದ ಅಧಿಕಾರಿ ಮಾತು ವೈರಲ್

 

ಬೆಳಗಾವಿ:
ಎಲ್ಲೆಡೆ ಜನಪ್ರತಿನಿಧಿಗಳೇ ಅಧಿಕಾರಿಗಳ ಮೇಲೆ ಅಟ್ಟಹಾಸ ಮಾಡುವ ಕಾಲದಲ್ಲಿ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಅಧಿಕಾರಿಯೊಬ್ಬರು ಶಾಸಕರನ್ನೇ ಹಿಗ್ಗಾಮುಗ್ಗ ಬೈದ ಘಟನೆ ವರದಿಯಾಗಿದ್ದು ಇದು ಎಲ್ಲೆಡೆ ವೈರಲ್ ಆಗಿದೆ.

ರಾಯಬಾಗ ಬಿಜೆಪಿ ಶಾಸಕ ದುರ್ಯೋದನ ಐಹೊಳೆ ಅವರೊಂದಿಗೆ ಗೋಕಾಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ನಾಯಕವಾಡಿ ಅವರು ಏಕವಚನದಲ್ಲೇ ಗದರಿಸಿದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

'ನಾನು ರಾಯಬಾಗ ಎಂಎಲ್‌ಎ ಮಾತನಾಡುತ್ತಿದ್ದೇನೆ. ರಾಯಬಾಗದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅರಣ್ಯ ಭವನ ಮಂಜೂರಾಗಿ, ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಈಗ ಸ್ಥಳೀಯ ಅಧಿಕಾರಿಗಳು ಅದನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ನೀವು ಸಮಸ್ಯೆ ಬಗೆಹರಿಸಿ ಕಾಮಗಾರಿ ಚಾಲೂ ಮಾಡಿಸಬೇಕು ಸಾಹೇಬರೆ' ಎಂದು ಐಹೊಳೆ ಕೇಳಿದ್ದಾರೆ.

ಮೊಬೈಲ್‌ನಲ್ಲಿ ಇನ್ನೊಂದು ಕಡೆಯಿಂದ ಪ್ರತಿಕ್ರಿಯಿಸಿದ ಅರಣ್ಯಾಧಿಕಾರಿ, 'ನೀವ್ ಯಾರು? ಶಾಸಕ ಎಂದು ನನಗೆ ಹೇಗೆ ಗೊತ್ತಾಗಬೇಕು' ಎಂದು ಕೇಳುತ್ತಾರೆ. 'ನಾನೇ ಶಾಸಕ ಮಾತನಾಡುತ್ತಿದ್ದೇನೆ, ನಿಮಗೇನು ಫೋಟೊ ಕಳಿಸಬೇಕೇ?' ಎಂದು ಶಾಸಕ ಕೇಳುತ್ತಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಫ್‌ಒ, 'ಎಲ್ಲಿ ಕಟ್ಟುತ್ತಿದ್ದಾರೆ? ಅದರಿಂದ ಏನಾಗಬೇಕು ಈಗ? ಅದೇನು ನಮ್ಮಪ್ಪನ ಜಾಗ ಅಲ್ಲ. ಸರ್ಕಾರದಿಂದ ಮಂಜೂರಾಗಬೇಕು. ಅನಧಿಕೃತ ಇದ್ದ ಕಾರಣ ಬಂದ್‌ ಮಾಡಿದ್ದಾರೆ' ಎನ್ನುತ್ತಾರೆ. ಇದಕ್ಕೆ ಕೋಪಗೊಂಡ ಶಾಸಕ, 'ಏಯ್‌ ನೆಟ್ಟಗೆ ಮಾತಾಡ್ರಿ. ಯಾಕ್‌ ಏಕವಚನದಾಗ ಮಾತಾಡತಿ' ಎಂದು ಹೇಳುತ್ತಾರೆ.

ಅದಕ್ಕೆ ಸಿಟ್ಟಾದ ಅಧಿಕಾರಿ, 'ನೀನು ಏಕವಚನದಲ್ಲಿ ಮಾತಾಡಿದರೆ ನಡೆಯೋದಿಲ್ಲ. ನೀನು ಎಂಎಲ್‌ಎ ಇದ್ದರೆ ನಿನಗೆ ಇರಬೇಕು. ನನಗೇನಲ್ಲ. ನಿಂದ ಗೊತ್ತಿದೆ ಹೋಗೋ ನನಗೆ. ನೀ ಯಾಂವ...' ಎಂದು ಅಧಿಕಾರಿ ಏರುದನಿಯಲ್ಲಿ ರೇಗುತ್ತಾರೆ. 'ಏಯ್‌ ನಿನ್ನಾಪ್ಪನ ಹೆಂಗ್‌ ಮಾತಾಡತಿ' ಎಂದು ಐಹೊಳೆ ಹೇಳುತ್ತಾರೆ.

'ನೀ ಹಿಂಗ್‌ ಮಾತಾಡಿದರೆ ನನ್ನ ಹತ್ತಿರ ನಡೆಯುವುದಿಲ್ಲ. ನೀನೇನು ಮನವಿ ಬರೆದು ಕೊಟ್ಟಿದ್ದೀಯಾ ನನಗೆ? ಹೀಗೆ ಮಾತಾಡಿದರೆ ಸುಮ್ಮನೇ ಬಿಡುವುದಿಲ್ಲ. ಈಗಲೇ ನಿನ್ನ ಮೇಲೆ ಕಂಪ್ಲೆಂಟ್‌ ಕೊಡುತ್ತೇನೆ' ಎಂದೂ ಅಧಿಕಾರಿ ರೇಗುತ್ತಾರೆ. 'ನಾನು ಸಾಹೇಬರೆ ಎಂದೇ ಮಾತಾಡಿದ್ದೇನೆ. ನಾನೇನು ನಿಮ್ಮದು ಹೊಲ ಕಸಗೊಂಡಿಲ್ಲ' ಎನ್ನುತ್ತಾರೆ ಶಾಸಕ. 'ಹಿಂಗ್‌ ರಿಕ್ವೆಸ್ಟ್‌ ಮಾಡಿಕೊಳ್ಳಿ. ಈಗಲೇ ಕೆಲಸ ಮಾಡಿ ಕೊಡುತ್ತೇನೆ. ಯಾರನ್ನೂ ಎದುರು ಹಾಕಿಕೊಳ್ಳಬೇಡಿ' ಎಂದೂ ಅಧಿಕಾರಿ ಹೇಳಿ ಫೋನ್‌ ಕಟ್‌ ಮಾಡಿದ್ದು ಆಡಿಯೊದಲ್ಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ