Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉಚಿತ ಕೊಡುಗೆಗಳನ್ನು ನೀಡಿದರೆ ಜನರು ಕೆಲಸ ಮಾಡುವುದಿಲ್ಲ: ಸುಪ್ರೀಂ ಕೋರ್ಟ್

Advertisement
 

ನವದೆಹಲಿ: ಚುನಾವಣೆಗೂ ಮುನ್ನ ಉಚಿತ ಕೊಡುಗೆಗಳನ್ನು ಘೋಷಿಸುವ ಪದ್ದತಿಗೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಉಚಿತವಾಗಿ ಪಡಿತರ ಮತ್ತು ಹಣವನ್ನು ನೀಡುವುದರಿಂದ ಜನರು ಕೆಲಸ ಮಾಡಲು ಸಿದ್ದರಿರುವುದಿಲ್ಲ ಎಂದು ಹೇಳಿದೆ.

ನಗರ ಪ್ರದೇಶಗಳಲ್ಲಿ ಸೂರಿಲ್ಲದವರಿಗೆ ಆಶ್ರಯ ಕಲ್ಪಿಸುವ ಹಕ್ಕಿನ ಕುರಿತಾದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಅಗಸ್ಟಿನ್ ಜಾರ್ಜ್ ಮಸಿಯಾ ಅವರಿದ್ದ ಪೀಠ ಈ ರೀತಿ ಅಭಿಪ್ರಾಯಪಟ್ಟಿದೆ.

ಅರ್ಜಿ ವಿಚಾರಣೆ ವೇಳೆ, ಜನರಿಗೆ ಉಚಿತ ಕೊಡುಗೆಗಳನ್ನು ನೀಡುವುದರಿಂದ ಅವರು ಯಾವುದೇ ಕೆಲಸಗಳನ್ನು ಮಾಡದೆ ಹಣ ಮತ್ತು ಪಡಿತರವನ್ನು ಪಡೆಯುತ್ತಾರೆ. ನಿಮ್ಮ ಕಳಕಳಿ ನಮಗೆ ಅರ್ಥವಾಗುತ್ತದೆ. ಆದರೆ ಅವರೂ ಮುಖ್ಯವಾಹಿನಿಗೆ ಬಂದು ಸಮಾಜದ ಭಾಗವಾಗಬೇಕು. ಜತೆಗೆ ದೇಶದ ಏಳಿಗೆಗೆ ಕೊಡುಗೆ ನೀಡಲು ಅವರಿಗೂ ಅವಕಾಶ ನೀಡಬೇಕು' ಎಂದು ಅರ್ಜಿದಾರರಿಗೆ ಪೀಠ ಹೇಳಿದೆ.

ನಗರ ಬಡತನ ನಿರ್ಮೂಲನೆ ಅಭಿಯಾನ ನಡೆಸಲು ಕೇಂದ್ರ ಸರ್ಕಾರ ಕೊನೆಯ ಹಂತದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರಿಂದ ನಗರ ಪ್ರದೇಶಗಳಲ್ಲಿ ಸೂರಿಲ್ಲದವರಿಗೆ ಮನೆಯನ್ನು ಕಟ್ಟಿಕೊಡುವುದು ಸೇರಿ ಹಲವು ಸಮಸ್ಯೆಗಳನ್ನು ನಿವಾರಣೆಯಾಗಲಿದೆ ಎಂದು ನ್ಯಾಯಪೀಠಕ್ಕೆ ಅಟಾರ್ನಿ ಜನರಲ್‌ ಆ‌ರ್. ವೆಂಕಟರಮಣಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಈ ಅಭಿಯಾನ ಎಷ್ಟು ಸಮಯದಲ್ಲಿ ಮುಗಿಯಲಿದೆ ಎಂದು ಪರಿಶೀಲನೆ ನಡೆಸುವಂತೆ ಕೇಂದ್ರಕ್ಕೆ ಸೂಚಿಸಿ, ವಿಚಾರಣೆಯನ್ನು ಆರು ವಾರ ಮುಂದೂಡಿತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ