Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಬ್ಬರ ಸಾವಿಗೆ ಕಾರಣವಾಯ್ತು ಅನೈತಿಕ ಸಂಬಂಧ : ಕೊಲೆಯಲ್ಲಿ ಅಂತ್ಯ

Advertisement

ಬೆಳಗಾವಿ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಆಕೆಯ ಪತಿ ಹಾಗೂ ಆತನ ಸ್ನೇಹಿತ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.

ಬಾಬು ಭೂಸಗೋಳ (35) ಕೊಲೆಯಾದ ದುರ್ದೈವಿ. ಆರೋಪಿಗಳು ಬಾಬು ಅವರ ತಲೆಗೆ ಕಲ್ಲಿನಿಂದ ಜಜ್ಜಿ ಹಾಗೂ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಕೊಲೆಯಾದ ಬಾಬು ಭೂಸಗೋಳ ಅವರು ಆರೋಪಿಯ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇದರ ಜೊತೆಗೆ, ಅವರು ಸಾರ್ವಜನಿಕ ರಸ್ತೆಯನ್ನು ಅತಿಕ್ರಮಣ ಮಾಡಿ ರಸ್ತೆ ಬಂದ್ ಮಾಡಿದ್ದರು ಎನ್ನಲಾಗಿದೆ. ಬಾಬು ಅವರ ಈ ದರ್ಪ ಮತ್ತು ಆಟಾಟೋಪಕ್ಕೆ ಬೇಸತ್ತು ಪತಿ ಹಾಗೂ ಆತನ ಸ್ನೇಹಿತ ಸೇರಿಕೊಂಡು ಈ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಕೊಲೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಸಂಕೇಶ್ವರ ಠಾಣೆಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಂಕೇಶ್ವರ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಬ್ಬರ ಸಾವಿಗೆ ಕಾರಣವಾಯ್ತು ಅನೈತಿಕ ಸಂಬಂಧ : ಕೊಲೆಯಲ್ಲಿ ಅಂತ್ಯಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ “ಪ್ರಜಾಸೇವೆ ಇಲಾಖೆ” ಸ್ಥಾಪನೆ: ಸಿಎಂ ಡಿ.ಕೆ. ಶಿವಕುಮಾರ್ಬೆಳಗಾವಿಯಲ್ಲಿ ಬೀಗರ ಮನೆಯ ಬೀಗ ಮುರಿದು ಚಿನ್ನ ಕದ್ದ ಕಸಾಯಿಗಲ್ಲಿ ಖದೀಮ..!ಬೆಳಗಾವಿಗೆ ವಿಜಯೇಂದ್ರಕೇಂದ್ರ ಸಚಿವ ಅಮಿತ್ ಶಾ ಅವರ ಭೇಟಿಗೆ ತೆರಳುತ್ತಿದ್ದ ಎಂಇಎಸ್ ಕಾರ್ಯಕರ್ತರನ್ನು ತಡೆದ ಪೊಲೀಸರು ಮುಂಗಾರು ಮಳೆ ತಡೆದದ್ದು ಬರೀ ‘ಎಲ್ ನಿನೊ’ ಮಾತ್ರವಲ್ಲ ; ಇತರ 5 ಜಾಗತಿಕ ಹವಾಮಾನ ವೈಪರೀತ್ಯಗಳೂ ಕಾರಣ…!ಮುಂಗಾರು ಸಂಪೂರ್ಣ ಸ್ಥಗಿತ: ಶೇ.41 ರಷ್ಟು ಮಳೆ ಕೊರತೆ..ಚಿಕ್ಕೋಡಿಯಲ್ಲಿ ಗಾರ್ಮೆಂಟ್ಸ್ ಅಂಗಡಿಗೆ ಬೆಂಕಿ ; ಲಕ್ಷಾಂತರ ರೂ. ಮೌಲ್ಯದ ಬಟ್ಟೆ ಭಸ್ಮ..ಕರ್ನಾಟಕದಲ್ಲಿ ಮುಂಗಾರು ಕ್ಷೀಣ : ಕರಾವಳಿ-ಮಲೆನಾಡಿನ ಜಿಲ್ಲೆಗಳಲ್ಲೇ ಭಾರಿ ಮಳೆ ಕೊರತೆ….!ಕಾನೂನು ಹೋರಾಟಕ್ಕೆ ತೆರೆ; ಭಾವುಕರಾದ ಚೈತ್ರಾ ಕುಂದಾಪುರ..!