
ಬೆಳಗಾವಿ: ಮಹತ್ವದ ಬೆಳವಣಿಗೆಯೊಂದರಲ್ಲಿ ವಿವಾದಾಸ್ಪದ ಕೃತಿ ರಚಿಸಿದ ಆರೋಪದ ಮೇರೆಗೆ ರವಿ ಹಂಜ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಮುಂದಾಗಿದ್ದಾರೆ. ಅದರಲ್ಲೂ ಬೆಳಗಾವಿ ಪೊಲೀಸ್ ವಶಕ್ಕೆ ಅವರನ್ನು ಒಪ್ಪಿಸಲಾಗುತ್ತದೆ.
'ಬಸವ ಮಂಟಪ' ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಸೇರಿದಂತೆ ರವಿ ಹಂಜ್ ಮತ್ತು ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಚಿವರು ಸಂಪುಟವು ಗುರುವಾರ ಅನುಮೋದನೆ ನೀಡಿದ ಬಳಿಕ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ರವಿ ಹಂಜ್ ಅವರ 'ಬಸವ ಮಂಟಪ' ಕೃತಿ ಕುರಿತು ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕರುನಾಡಿನ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣ ಹಾಗೂ ವೀರಶೈವ ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಪುಸ್ತಕ ಬರೆದ ಲೇಖಕ ರವಿ ಹಂಜ್ ಅವರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.
ರವಿ ಹಂಜ್ ವಿರುದ್ಧ ಲುಕ್ಔಟ್ ನೋಟಿಸ್ ಸಹ ಜಾರಿ ಮಾಡಲಾಗಿದೆ. ಇದರ ಆಧಾರದ ಮೇಲೆ ಆತನನ್ನು ಕೇರಳದ ಕೊಚ್ಚಿ ವಿಮಾನದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ತಿಳಿಸಿದ್ದಾರೆ.
ಬಸವಣ್ಣ ಅವರಿಗೆ ಅವಮಾನ ಮಾಡಿದ ಆರೋಪದ ಮೇಲೆ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ರವಿ ಹಂಜ್ ವಿರುದ್ಧ ಎಫ್ಐಆರ್ಗಳು ದಾಖಲಾಗಿವೆ.
ರವಿ ದುಬೈಗೆ ತೆರಳುತ್ತಿದ್ದ ವೇಳೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಪ್ರಕಾಶಕ, ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧವೂ ಸಹ ಪ್ರಕರಣ ದಾಖಲಿಸಲಾಗಿದೆ.