Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪತ್ರಕರ್ತರಿಗೆ ಮಹತ್ವದ ಸೂಚನೆ

ಬೆಳಗಾವಿ: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ೨೦೨೪-೨೫ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡ್, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ವಿತರಿಸಲಾಗಿರುವ ಮಾಧ್ಯಮ ಮಾನ್ಯತಾ ಕಾರ್ಡ್ ಹೊಂದಿರುವ ಬಗ್ಗೆ ದೃಢೀಕೃತ ಜೆರಾಕ್ಸ್ ಪ್ರತಿ, ಜಾತಿ ದೃಢೀಕರಣಕ್ಕಾಗಿ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಅರ್ಜಿಯಲ್ಲಿ ನಮೂದಿಸಲಾಗಿರುವ ಎಲ್ಲಾ ಮಾಹಿತಿಗಳಿಗೆ ಅಧಿಕೃತ ಪೂರಕ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದೊಳಗಾಗಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ, ಮಂಡಳಿಗಳಿAದ ಹಾಗೂ ಸರ್ಕಾರದ ಯಾವುದೇ ಇಲಾಖೆಗಳಿಂದ ಈ ಯೋಜನೆಯಡಿ ಮಾಧ್ಯಮ ಕಿಟ್‌ಗಳನ್ನು ಪಡೆದಿರುವುದಿಲ್ಲ ಎಂದು ರೂ. ೧೦೦ ರ ಬಾಂಡ್‌ನಲ್ಲಿ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು. ಮಾಧ್ಯಮ ಕಿಟ್ ಒದಗಿಸಲು ಪತ್ರಕರ್ತರ ಸೇವಾ ಹಿರಿತನ, ವಯೋಮಿತಿ ಹಾಗೂ ಸೇವಾನುಭವದ ಗರಿಷ್ಠತೆಯನ್ನು ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ, ಪ್ರಸಾರ ಸಂಖ್ಯೆ, ಪತ್ರಿಕೆಯ ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ ದಿನಾಂಕ: ೧೦-೧೧-೨೦೨೪ ರ ಸಂಜೆ ೫:೦೦ ಗಂಟೆಯೊಳಗೆ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು. ಲಕೋಟೆಯ ಮೇಲ್ಬಾಗದಲ್ಲಿ “ಪ.ಜಾ ಹಾಗೂ ಪ.ಪಂ.ಮಾಧ್ಯಮ ಮಾನ್ಯತೆ ಪತ್ರಕರ್ತರಿಗೆ ಮೀಡಿಯಾ ಕಿಟ್ ಗಾಗಿ ಅರ್ಜಿ" ಎಂದು ನಮೂದಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ