Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪತ್ರಿಕೋದ್ಯಮ ಪದವೀಧರರಿಗೆ ಮಹತ್ವದ ಸೂಚನೆ

 

ಬೆಳಗಾವಿ :
2023-24ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಬೆಳಗಾವಿ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 35 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂ.ಗಳ ಸ್ಟೈಫಂಡ್ ನೀಡಲಾಗುವುದು. ಈ ತರಬೇತಿಯು 12 ತಿಂಗಳ ಅಪ್ರೆಂಟಿಸ್ ತರಬೇತಿಯಾಗಿದ್ದು, ತಾತ್ಕಾಲಿಕವಾಗಿರುತ್ತದೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ಡಿಸೆಂಬರ್ 6, 2023 ಕೊನೆಯ ದಿನವಾಗಿದೆ. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಜಿಲ್ಲಾ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು.

ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಈ ಮೇಲ್ಕಂಡ ಷರತ್ತುಗಳನ್ನು ಪಾಲಿಸುವುದಾಗಿ ಆಯ್ಕೆಯಾದ ಅಭ್ಯರ್ಥಿಗಳು 20 ರೂ.ಗಳ ಛಾಪಾ ಕಾಗದದಲ್ಲಿ ಲಿಖಿತ ಹೇಳಿಕೆ ನೀಡಬೇಕು.

ಆಸಕ್ತರು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, "ವಾರ್ತಾಭವನ", ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನ್ಯಾಯಾಲಯ ಆವರಣ, ಬೆಳಗಾವಿ ಅಥವಾ ಮೊಸಂ.9448589639 ಸಂಪರ್ಕಿಸಬಹುದು ಎಂದು ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ