Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ 

 ಬೆಂಗಳೂರು : ಕರ್ನಾಟಕದಲ್ಲಿ ಇನ್ನು ಮುಂದೆ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಲಭ್ಯ. ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರ ಜೊತೆ ಗಂಡು ಮಕ್ಕಳಿಗೂ ಸೌಲಭ್ಯ ವಿಸ್ತರಿಸಲಾಗಿದೆ.

ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸಿಗಲಿದೆ. ಪಾಸ್ ಪಡೆಯಲು 'ಕರ್ನಾಟಕ ಒನ್' ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ಪಾವತಿಸಿದ ಶುಲ್ಕ ಮರುಪಾವತಿ ಮಾಡಲಾಗುವುದು ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.

ಈಗ ಸಾರಿಗೆ ಇಲಾಖೆಯು ಯೋಜನೆ ಜಾರಿಗೆ ಸಂಪೂರ್ಣ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದ್ದು, ಇನ್ನು ಒಂದೆರಡು ದಿನಗಳಲ್ಲಿ ಅಧಿಕೃತ ಗೈಡ್‌ಲೈನ್ಸ್ ಬಿಡುಗಡೆಯಾಗಲಿದೆ. ಈ ನಿರ್ಧಾರದಿಂದಾಗಿ ರಾಜ್ಯದ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಭಾರಿ ಆರ್ಥಿಕ ನೆರವು ಸಿಗಲಿದೆ.

ಕರ್ನಾಟಕ ಒನ್' ಅಥವಾ 'ಬೆಂಗಳೂರು ಒನ್ ಕೇಂದ್ರಗಳಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಸಲ್ಲಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಸಲ್ಲಿಸುವ ದಾಖಲಾತಿಗಳು ಹಾಗೂ ಅರ್ಜಿಗಳನ್ನು ಸಾರಿಗೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ ನಂತರ, ಸಂಪೂರ್ಣ ಉಚಿತವಾಗಿ ಬಸ್ ಪಾಸ್‌ಗಳನ್ನು ವಿತರಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, 2026-27ನೇ ಶೈಕ್ಷಣಿಕಸಾಲಿಗೆ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ಸರ್ಕಾರದ ಇಡಿಸಿಎಸ್ ಇಲಾಖೆಯ ಸೇವಾಸಿಂಧು ಪೋರ್ಟಲ್ ಮೂಲಕ ದಿನಾಂಕ: 29-05-2026 ರಿಂದ ವಿತರಿಸಲಾಗುತ್ತಿದೆ.

ಕರ್ನಾಟಕ ಸರ್ಕಾರವು "ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಅನುಮೋದನೆ ನೀಡಿ ಆದೇಶಿಸಿದೆ".

ಮೇಲ್ಕಂಡ ಆದೇಶದಂತೆ ಕರಾರಸಾನಿಗಮವು ಕೆಳಕಂಡ ಕ್ರಮಗಳನ್ನು ತೆಗೆದುಕೊಂಡಿದೆ.

1. ದಿನಾಂಕ: 12.06.2026 ರಿಂದ, ರಾಜ್ಯದಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸುಗಳನ್ನು ವಿತರಿಸಲಾಗುವುದು.

2. ವಿದ್ಯಾರ್ಥಿ ಬಸ್ ಪಾಸ್ ವಿತರಣೆಯಲ್ಲಿ ಹಾಲಿ ಅನುಸರಿಸುತ್ತಿರುವ ನಿಯಮಾವಳಿಗಳನ್ನು (ವಿದ್ಯಾರ್ಥಿ ಪಾಸಿಗಾಗಿ ಶೈಕ್ಷಣಿಕ ವಿದ್ಯಾಭ್ಯಾಸದ ಅರ್ಹತಾ ಮಾನದಂಡಗಳು, ದೂರದ ಮಿತಿ, ಪಾಸಿನ ಕಾಲಾವಧಿ ಇತ್ಯಾದಿ) ಮುಂದುವರೆಸಲಾಗಿದೆ.

3. ವಿದ್ಯಾರ್ಥಿಗಳುಉಚಿತ ಬಸ್ ಪಾಸ್ ಪಡೆಯಲು, ಈ ಹಿಂದಿನಂತೆ ಕರ್ನಾಟಕ ಸರ್ಕಾರದ ಸೇವಾಸಿಂಧು ಪೋರ್ಟಲ್‌ನಲ್ಲಿ, ಶಾಲೆಗಳು ಸೇರಿದಂತೆ ಎಲ್ಲಿಂದಲಾದರೂ, ಆನ್‌ಲೈನ್‌ನಲ್ಲಿಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ಸೇವಾಸಿಂಧು

(https://sevasindhuservices.karnataka.gov.in/buspassservices/).

4. ಕರಾರಸಾ ನಿಗಮ ವ್ಯಾಪ್ತಿಯ 123 ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್‌ನಲ್ಲಿಒದಗಿಸಲಾಗಿದೆ. ನಿಗಮದ ವೆಬ್‌ಸೈಟ್ ವಿಳಾಸ: https://ksrtc.karnataka.gov.in/student pass.

ಪಾಸುಗಳು 5. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ವಿತರಿಸಲಾಗಿರುವ ವಿದ್ಯಾರ್ಥಿ ಯಥಾವತ್ತಾಗಿ ಚಾಲ್ತಿಯಲ್ಲಿರುತ್ತವೆ. ಆದಾಗ್ಯೂ ವಿದ್ಯಾರ್ಥಿಗಳು ಪಾವತಿಸಿರುವ ಮೊತ್ತವನ್ನು ಹಿಂದಿರುಗಿಸಲಾಗುವುದು.

6. ರಾಜ್ಯದಲ್ಲಿ ವಾಸವಿದ್ದು, ನೆರೆರಾಜ್ಯಗಳಲ್ಲಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ನೆರೆರಾಜ್ಯಗಳಲ್ಲಿ (ರಾಜ್ಯದಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಉಚಿತ ಬಸ್ ಪಾಸ್ ಪಡೆಯಬಹುದಾಗಿದೆ.

7. ಈಗಾಗಲೇ ಪ್ರಸಕ್ತ ಶೈಕ್ಷಣಿಕ ವರ್ಷ 2026-27ನೇ ಸಾಲಿನಲ್ಲಿ ಶುಲ್ಕ ಪಡೆದು ವಿತರಿಸಲಾದ ಪಾಸುಗಳ ಸಂಪೂರ್ಣ ಶುಲ್ಕವನ್ನು 15 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿಸಲಾಗುವುದು. ಸದರಿ ಪ್ರಕ್ರಿಯೆ ಬಗ್ಗೆ ಪ್ರತ್ಯೇಕವಾಗಿ ತಿಳಿಸಲಾಗುವುದು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ