Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ- ಕಾಸರಗೋಡು ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ: ಸ್ಪರ್ಧಾತ್ಮಕ ಜಗತ್ತಿಗೆ ಪೂರಕವಾದ ಮಾದರಿಯಲ್ಲಿ  ಕನ್ನಡ ಎಂ.ಎ ಶಿಕ್ಷಣ

ಕಾಸರಗೋಡು : ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಾತಿ ಇಷ್ಟರಲ್ಲೇ ಆರಂಭವಾಗಲಿದ್ದು, ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಕೋರಲಾಗಿದೆ.

ಕೇರಳ ಕೇಂದ್ರೀಯ ವಿಶ್ವವಿದ್ಯಾಲಯವು ಕೇಂದ್ರ ಸರ್ಕಾರದ ಪಾರ್ಲಿಮೆಂಟ್ ಆಕ್ಟ್ 2009ರ ಅಧಿನಿಯಮದ ಪ್ರಕಾರ 2009ನೆಯ ಇಸವಿಯಿಂದ ಕೇರಳ ರಾಜ್ಯದ ಕಾಸರಗೋಡಿನ ಪೆರಿಯದಲ್ಲಿ ಪ್ರಸ್ತುತ 27 ವಿಭಾಗಗಳನ್ನು ಒಳಗೊಂಡು ಕಾರ್ಯನಿರ್ವಹಿಸುತ್ತಿದೆ. ಜೊತೆಗೆ  ದೇಶದ ಎಲ್ಲ ಭಾಗದ ನುರಿತ  ಅಧ್ಯಾಪಕರನ್ನು ಒಳಗೊಂಡಿದೆ. 
2019ರಿಂದ  ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಭಾಗವು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.
 
 ಸ್ಥಳದಲ್ಲೇ ದಾಖಲಾತಿ ದಿನಾಂಕ
Spot Admission Date: 07/07/2026
ಸ್ಥಳ: ಕನ್ನಡ ವಿಭಾಗ
ದಾಖಲಾತಿ ನೋಂದಣಿ: ಬೆಳಗ್ಗೆ 9.30 ಗಂಟೆ
ಪ್ರವೇಶ ಪರೀಕ್ಷೆ:  10.30 ಗಂಟೆ

ಯಾರು ಅರ್ಜಿ ಸಲ್ಲಿಸಬಹುದು?
1. ಕನ್ನಡವನ್ನು ಭಾಷೆಯಾಗಿ/ಐಚ್ಛಿಕವಾಗಿ ಅಭ್ಯಾಸಮಾಡಿದ ಪದವೀಧರರು.
2. ಅಂತಿಮ ವರ್ಷದ ಪದವಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ  ವಿದ್ಯಾರ್ಥಿಗಳು
3. ದಾಖಲಾತಿಗೆ ವಯೋಮಿತಿ ಇಲ್ಲ.

 ಹೆಚ್ಚಿನ ಮಾಹಿತಿಗೆ 
9449258183
9964022582
8970162207  
9731325093 ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಕನ್ನಡ ವಿಭಾಗದ ಸೌಲಭ್ಯಗಳು:-
ನುರಿತ ಕ್ರಿಯಾಶೀಲ ಅಧ್ಯಾಪಕ ವರ್ಗ, ಉದ್ಯಮಶೀಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾದ ಪಠ್ಯಕ್ರಮ, ಸುಸಜ್ಜಿತ ಕಟ್ಟಡ, ಹಾಸ್ಟೆಲ್ ವ್ಯವಸ್ಥೆ, ಬಸ್ , ವಿದ್ಯಾರ್ಥಿ ಸೈಕಲ್, ಅತ್ಯುತ್ತಮ ಗ್ರಂಥಾಲಯ, ಯುಜಿಸಿ-ನೆಟ್ - ಜೆಆರ್ ಎಫ್ , ಕೆ-ಸೆಟ್ , TETಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ಬಹುಭಾಷೆ ಬಹುಸಂಸ್ಕೃತಿಗಳ ಪರಿಚಯ, ಪ್ರತಿಭಾ ಪ್ರದರ್ಶನಕ್ಕೆ ವಿದ್ಯಾರ್ಥಿ ವೇದಿಕೆ, ಚಂದ್ರಗಿರಿ ಭಿತ್ತಿಪತ್ರಿಕೆ ಮತ್ತು ಕನ್ನಡ ಸಂಘ, ಕನ್ನಡದಲ್ಲಿ ಎಂ.ಎ ಮಾಡುವ ವಿದ್ಯಾರ್ಥಿಗಳಿಗಾಗಿ  ವಿವಿಧ ವಿದ್ಯಾರ್ಥಿ ವೇತನ ಸೌಲಭ್ಯ ಇರುತ್ತವೆ. ಆಸಕ್ತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ