Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದಲ್ಲಿ ಈ ವಾರ ಮಳೆ ಮತ್ತಷ್ಟು ಚುರುಕು ; ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಜೂನ್‌ನಲ್ಲಿ ಮಂಕಾಗಿದ್ದ ಮುಂಗಾರು ಮಳೆ ಜುಲೈ ಮೊದಲ ವಾರದಲ್ಲಿ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಜೂನ್ 29ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯಾಗಲಿದ್ದು,  ಯೆಲ್ಲೋ ಅಲರ್ಟ್ ಕೊಡಲಾಗಿದೆ.  ಶಿವಮೊಗ್ಗ ಹಾಸನಕ್ಕೆ ಭಾರಿ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಲ್ಲದೆ ಉತ್ತರ ಕರ್ನಾಟಕದ ಭಾಗಗಳಾದ ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 1ರ ವರೆಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.  ಜೂನ್ 30 ರಂದು ಕೊಡಗು-ಚಿಕ್ಕಮಗಳೂರಲ್ಲಿ ಅತಿ ಭಾರಿ ಮಳೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 2ರಿಂದ ಕರಾವಳಿ, ಮಲೆನಾಡು, ಕಲ್ಯಾಣ ಕರ್ನಾಟಕದಲ್ಲಿ ಮಳೆ ಚುರುಕಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 2 ಹಾಗೂ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ರಾಯಚೂರು, ಯಾದಗಿರಿ, ಹಾಸನ, ಶಿವಮೊಗ್ಗ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮಜಿಮ್ ಖಾನಾ ಕ್ಲಬ್‌ನಲ್ಲಿ ನಡೆದ ಫೈರಿಂಗ್ ಪ್ರಕರಣದ ಆರೋಪಿ ಬಂಧನ