Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಹತ್ವದ ₹2,300 ಕೋಟಿ ರೂ. ಯೋಜನೆಗೆ ಅಸ್ತು-ದೇಶದ ಪ್ರಪ್ರಥಮ ವಿಮಾನ ನಿರ್ವಹಣೆ, ದುರಸ್ತಿ ಯೋಜನೆಗೆ ಚಾಲನೆ: ಎಂ ಬಿ ಪಾಟೀಲ

ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ಸೋಮವಾರ ಇಲ್ಲಿ ಒಡಂಬಡಿಕೆಗೆ ಅಂಕಿತ ಹಾಕಲಾಯಿತು.

ಬಳಿಕ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ ಟಿಎಎಸ್ಎಲ್ ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ವಿಧಾನಸೌಧದಲ್ಲಿ ನಡೆದ ಒಡಂಬಡಿಕೆ ವಿನಿಮಯದ ನಂತರ ಮಾತನಾಡಿದ ಸಚಿವ ಪಾಟೀಲ, `ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಇಡೀ ಭಾರತದಲ್ಲಿ ಇದು ಇಂತಹ ಮೊಟ್ಟಮೊದಲ ಯೋಜನೆಯಾಗಿದೆ’ ಎಂದರು.

ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕಂಪನಿಯು ಮೂರು ಯೋಜನೆಗಳಿಗೆ 1,030 ಕೋಟಿ ರೂ. ಬಂಡವಾಳ ಹೂಡಲಿದೆ. ಇವುಗಳ ಪೈಕಿ 420 ಕೋಟಿ ರೂ.ಗಳನ್ನು ಅದು ನಾಗರಿಕ ವಿಮಾನಗಳನ್ನು ಸರಕು ಸಾಗಣೆ ವಿಮಾನಗಳನ್ನಾಗಿ (ಫ್ರೈಟರ್) ಪರಿವರ್ತಿಸುವ ಘಟಕ ಸ್ಥಾಪನೆಗೆ ವಿನಿಯೋಗಿಸಲಿದೆ. ಜೊತೆಗೆ 310 ಕೋಟಿ ರೂ. ಹೂಡಿಕೆಯೊಂದಿಗೆ ಗನ್ ತಯಾರಿಕೆ ಘಟಕ ಮತ್ತು 300 ಕೋಟಿ ರೂ. ವೆಚ್ಚದಲ್ಲಿ ವಿಮಾನಯಾನ ಮತ್ತು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಿದೆ. ಇದರಿಂದ 450 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ವಿವರಿಸಿದರು.

ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ಮತ್ತು ಕೋಲಾರದಲ್ಲಿ ಟಿಎಎಸ್ಎಲ್ ತಾನು ಸ್ಥಾಪಿಸಲಿರುವ ಗನ್ ತಯಾರಿಕೆ ಘಟಕದ ಮೂಲಕ ತನಗೆ ಅಗತ್ಯವಿರುವ 13 ಸಾವಿರ ಬಿಡಿಭಾಗಗಳ ಪೈಕಿ ಶೇಕಡ 50ರಷ್ಟನ್ನು ಪೂರೈಸಿಕೊಳ್ಳುವ ಆಲೋಚನೆ ಹೊಂದಿದೆ. ಇದರಿಂದಾಗಿ 300ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 2-3 ಸಾವಿರ ಜನರಿಗೆ ಉದ್ಯೋಗಗಳು ಸಿಗಲಿವೆ. 1939ರಷ್ಟು ಹಿಂದೆಯೇ ಬೆಂಗಳೂರಿನಲ್ಲಿ ಎಚ್ಎಎಲ್ ಸ್ಥಾಪನೆಯಾಗುವುದರೊಂದಿಗೆ ರಾಜ್ಯವು ವೈಮಾನಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದು ಅವರು ಹೇಳಿದರು.

ರಕ್ಷಣಾ ಇಲಾಖೆಗೆ ಬೇಕಾಗುವ ವಿಮಾನಗಳು ಮತ್ತು ಹೆಲಿಕಾಪ್ಟರುಗಳ ಪೈಕಿ ಶೇಕಡ 67ರಷ್ಟು ಕರ್ನಾಟಕದಲ್ಲೇ ತಯಾರಾಗುತ್ತಿದೆ. ಜತೆಗೆ ದೇಶದ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ರಫ್ತು ವಹಿವಾಟಿಗೆ ರಾಜ್ಯವು ಶೇಕಡ 65ರಷ್ಟು ಕೊಡುಗೆ ನೀಡುತ್ತಿದೆ. ದೇಶದಲ್ಲಿ ಈ ವಲಯದಲ್ಲಿರುವ ಕಂಪನಿಗಳ ಪೈಕಿ ಶೇ.70ರಷ್ಟು ಕಂಪನಿಗಳು ಕರ್ನಾಟಕದಲ್ಲೇ ನೆಲೆ ಹೊಂದಿವೆ.

ಕಾರ್ಯಕ್ರಮದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಏರ್ ಇಂಡಿಯಾದ ಉನ್ನತಾಧಿಕಾರಿಗಳಾದ ಮನನ್ ಚೌಹಾಣ್, ಕಾರ್ತಿಕೇಯ ಭಟ್, ಅತುಲ್ ಶುಕ್ಲ, ಟಿಎಎಸ್ಎಲ್ ಉನ್ನತಾಧಿಕಾರಿಗಳಾದ ಗುರು ದತ್ತಾತ್ರೇಯ, ಅರ್ಜುನ್ ಮೈನೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಹರಿ ಮಾರಾರ್, ಸಿಒಒ ಸಾತ್ಯಕಿ ರಘುನಾಥ್, ಸಿಎಫ್ಒ ಭಾಸ್ಕರ್ ರವೀಂದ್ರ ಮುಂತಾದವರು ಉಪಸ್ಥಿತರಿದ್ದರು.

*ಕ್ಯಾಪ್ಶನ್*
ಟಾಟಾ ಸಮೂಹವು ರಾಜ್ಯದಲ್ಲಿ ಮಾಡಲಿರುವ ಹೂಡಿಕೆಗೆ ಸಂಬಂಧಿಸಿದ ಒಡಂಬಡಿಕೆಗೆ ಸೋಮವಾರ ಬೆಂಗಳೂರಿನಲ್ಲಿ ಅಂಕಿತ ಹಾಕಿ, ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಂ ಬಿ ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಟಾಟಾ ಸಮೂಹದ ಉನ್ನತಾಧಿಕಾರಿಗಳಾದ ನಿಪುಣ್ ಅಗರವಾಲ್, ಸುಕರಣ್ ಸಿಂಗ್, ಬಿಐಎಎಲ್ ನ ಹರಿ ಮಾರಾರ್, ಸಾತ್ಯಕಿ ರಘುನಾಥ್ ಇದ್ದರು.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು