Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಂದು ಸಂಜೆ ಬೆಳಗಾವಿ ನಾಡಹಬ್ಬ ಉದ್ಘಾಟನೆ

ಬೆಳಗಾವಿ: ನಗರದ ಕನ್ನಡ ಸಾಹಿತ್ಯ ಭವನ ಆವರಣದಲ್ಲಿ ಅ.3ರಿಂದ 7ರವರೆಗೆ 97 ನೇ ನಾಡಹಬ್ಬ ಉತ್ಸವ ಆಚರಿಸಲಾಗುತ್ತಿದೆ.

ನಾಡಹಬ್ಬ ಉತ್ಸವ ಸಮಿತಿ ಅಧ್ಯಕ್ಷ ಡಾ.ಎಚ್‌.ಬಿ.ರಾಜಶೇಖರ ಅವರು ಪತ್ರಕರ್ತರ ಜೊತೆ ಮಾತನಾಡಿ,1927ರಿಂದ ಬೆಳಗಾವಿಯಲ್ಲಿ ನಾಡಹಬ್ಬ ಉತ್ಸವ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಸಮಿತಿ ಪ್ರಧಾನ ಕಾರ್ಯದರ್ಶಿ ಸಿ.ಕೆ.ಜೋರಾಪುರ ಮಾತನಾಡಿ, 3 ರಂದು ಸಂಜೆ 6ಕ್ಕೆ ಸಂಸದ ಜಗದೀಶ ಶೆಟ್ಟ‌ರ ಉದ್ಘಾಟಿಸುವರು. ಗದುಗಿನ ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಆಸೀಫ್ ಸೇರ್ ಆಗಮಿಸುವರು. ಮಾಜಿ ಸಂಸದೆ ಮಂಗಲಾ ಅಂಗಡಿ ಅಧ್ಯಕ್ಷತೆ ವಹಿಸುವರು. ಬಿ.ಎಸ್.ಗವಿಮಠ ಉಪನ್ಯಾಸ ನೀಡುವರು ಎಂದು ತಿಳಿಸಿದರು.

4 ರಂದು ಸಂಜೆ 6 ಕ್ಕೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಸವಿನೆನಪು ಕಾರ್ಯಕ್ರಮ ನಡೆಯಲಿದೆ. ಕಾರಂಜಿಮಠದ ಗುರುಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಉಪಸ್ಥಿತರಿರುವರು. ಎಲ್.ಎಸ್.ಶಾಸ್ತ್ರಿ ಅಧ್ಯಕ್ಷತೆ ವಹಿಸುವರು. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರನ್ನು ಸನ್ಮಾನಿಸಲಾಗುವುದು.

5 ರಂದು ಸಂಜೆ 6 ಕ್ಕೆ ಜಾಗತಿಕ ವಿದ್ಯಮಾನಗಳು ಮತ್ತು ಭಾರತ ಕಾರ್ಯಕ್ರಮದಲ್ಲಿ ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಗೋವಿಂದಪ್ಪ ಗೌಡಪ್ಪಗೋಳ ಉಪಸ್ಥಿತರಿರುವರು ಎಂದರು.

6ರಂದು ಸಂಜೆ 6 ಕ್ಕೆ ಮಹಿಳಾ ದೌರ್ಜನ್ಯ ಮತ್ತು ಪುರುಷ ದೌರ್ಜನ್ಯ ಕಾರ್ಯಕ್ರಮ ನಡೆಯಲಿದೆ. ಚನ್ನಮ್ಮನ ಕಿತ್ತೂರಿನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಜಯಲಕ್ಷ್ಮಿ ಪುಟ್ಟಿ, ಮುರುಗೇಶ ಶಿವಪೂಜಿ, ರವಿ ಕೋಟಾರಗಸ್ತಿ ಉಪನ್ಯಾಸ ನೀಡುವರು. 7 ರಂದು ಸಂಜೆ 6ಕ್ಕೆ ನಡೆಯಲಿರುವ ಕವಿಗೋಷ್ಠಿಯನ್ನು ಬಸವರಾಜ ಜಗಜಂಪಿ ಉದ್ಘಾಟಿಸುವರು. ಎಚ್.ಐ.ತಿಮ್ಮಾಪುರ ಅಧ್ಯಕ್ಷತೆ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಉಪಸ್ಥಿತರಿರುವರು. ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೇರಿ ಹಲವು ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ