Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೆ.ಎಲ್.ಇ. ಶಿಕ್ಷಣ ಮಹಾವಿದ್ಯಾಲಯ: ರೋವರ್ಸ - ರೇಂಜರ್ಸ್ ಘಟಕ ಉದ್ಘಾಟನೆ

 

ಬೆಳಗಾವಿ: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಾಗಲು ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಲಿದೆ. ಪ್ರಶಿಕ್ಷಣಾರ್ಥಿಗಳು ತಮ್ಮ ತರಬೇತಿ ಮಟ್ಟದಲ್ಲಿಯೇ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಕೌಶಲಗಳನ್ನು ಬೆಳೆಸಬೇಕಿರುವುದು ಅವಶ್ಯಕವಾಗಿದೆ ಎಂದು ಶಿವರಾಯ ಏಳುಕೋಟಿ ಹೇಳಿದರು.

ಮಂಗಳವಾರ ಅವರು ನಗರದ ಬೆಳಗಾವಿ ಕೆಎಲ್ಇ ಶಿಕ್ಷಣ ಮಹಾವಿದ್ಯಾಲಯದ ಬಿಎಡ್ ರೋವರ್, ರೇಂಜರ್ಸ ಘಟಕದ ಉದ್ಘಾಟನಾ ಕಾರ್ಯಕ್ರಮದ ಅತಿಥಿಗಳಾಗಿ ಮಾತನಾಡಿದರು.

ಅಂತಾರಾಷ್ಟ್ರೀಯ ಚಳುವಳಿಯಾಗಿ ಸ್ಕೌಟ್ಸ್ ತನ್ನದೆಯಾದ ಪಾರುಪತ್ಯವನ್ನು ಹೊಂದಿದ್ದು ಲಕ್ಷಾಂತರ ಸದಸ್ಯರನ್ನು ಹೊಂದಿದ್ದು ಅದರ ಗುರಿ- ಉದ್ದೇಶಗಳು ಸಾರ್ವಕಾಲಿಕವಾದವು ಎಂದರು.

ಇನ್ನೋರ್ವ ಅತಿಥಿಗಳಾದ ಪಾರ್ವತಿ ಚಿಮ್ಮಡ ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿನ ನೀತಿ ನಿಯಮಗಳನ್ನು ಸವಿವರವಾಗಿ ಪ್ರಶಿಕ್ಷಣಾರ್ಥಿಗಳಿಗೆ ತಿಳಿಪಡಿಸಿದರು. ಚಿಕ್ಕಂದಿನಿಂದಲೇ ವಿದ್ಯಾರ್ಥಿಗಳನ್ನು ಇಂತಹ ಸಂಘಟನೆಯತ್ತ ಸೆಳೆಯಬೇಕು ಎಂದು ಕರೆ ನೀಡಿದರು.

ಪ್ರಾಚಾರ್ಯ ವಿ.ಪಿ. ಕುರಿ
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಇಂತಹ ಜಾಗತಿಕ ಜಾಗೃತಿ ಸಂಘಟನೆಗಳು ಸಾಮಾಜಿಕ ಜವಾಬ್ದಾರಿಗಳನ್ನು ಹೆಚ್ಚಿಸಿ ತಮ್ಮನ್ನು ತಾವು ಕ್ರಿಯಾಶೀಲರಾಗಿರುವಂತೆ ಮಾಡುತ್ತವೆ ಈ ನಿಟ್ಟಿನಲ್ಲಿ ಶಿಕ್ಷಣಾರ್ಥಿಗಳು ಉತ್ತಮ ಕಾರ್ಯಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕೆಂದರು. ಉಪನ್ಯಾಸಕರಾದ , ಡಿ.ಕೆ.ಕುಲಕರ್ಣಿ, ಸುಜಾತಾ ಪೈ, ಎಸ್.ಕೆ. ತಳವಾರ, ಸಿದ್ದಪ್ಪ ಪಿ, ಗಿರಿಜಾ ಕಾಡಣ್ಣವರ, ಭುವನೇಶ್ವರಿ ಪಾಟೀಲ,

ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಭುವನೇಶ್ವರಿ, ಸೋನಂ ತೋಡಕರ ಮುಂತಾದವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.

ರೇಂಜರ್ಸ ಮುಖ್ಯಸ್ಥೆ ಅನಿತಾ ದೊಡಮನಿ ಸ್ವಾಗತಿಸಿದರು.
ಜಗನ್ನಾಥ ಗೋಲಿಹಳ್ಳಿ ಪ್ರಾರ್ಥಿಸಿ ಪ್ರಾಸ್ತಾವುಕವಾಗಿ ಮಾತನಾಡಿದರು.
ಪ್ರಣೀತಾ ಮಿರಜಕರ ನಿರೂಪಿಸಿದರು. ಬಸಮ್ಮ ವಂದಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ