Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸುಳೇಬಾವಿ ಸರಕಾರಿ ಪ್ರೌಢಶಾಲೆ ನೂತನ ಕಟ್ಟಡ ಉದ್ಘಾಟನೆ

 

ಬೆಳಗಾವಿ :
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಬಾವಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಬೆಳಗಾವಿ ವಿಭಾಗದಿಂದ 2019-20 ನೇ ಸಾಲಿನ ನಬಾರ್ಡ್ ಆರ್.ಐ.ಡಿ.ಎಫ್ 25ನೇ ಯೋಜನೆಯಡಿ ನಿರ್ಮಿಸಲಾದ ಸರಕಾರಿ ಪ್ರೌಢಶಾಲೆಯ ನೂತನ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ "ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇತರ ಮೂಲಸೌಲಭ್ಯಗಳ ಜೊತೆಗೆ ಶೈಕ್ಷಣಿಕ ಅಭಿವೃದ್ಧಿಗೂ ಸಾಕಷ್ಟು ಒತ್ತು ನೀಡಲಾಗಿದೆ. ಗ್ರಾಮಿಣ ಭಾಗದ ಅನೇಕ ಶಾಲೆಗಳನ್ನು ಸ್ಮಾರ್ಟ್ ಆಗಿ ಉನ್ನತೀಕರಿಸಿದ್ದು ಹಲವಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ಪಟ್ಟಣ, ನಗರಗಳಲ್ಲಿ ಲಭಿಸುವ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ" ಎಂದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, "ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಮಾರ್ಗದರ್ಶನದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರಾದ್ಯಂತ ಕೈಗೊಳ್ಳಲಾಗುತ್ತಿದ್ದು ಇನ್ನೂ ಹೆಚ್ಚಿನ ಅಭಿವೃದ್ಧಿಯ ಸಂಕಲ್ಪ ಸಾಕಾರವಾಗಲು ಜನತೆ ಕೂಡ ಕೈಜೋಡಿಸಬೇಕು" ಎಂದರು.

ಈ ಸಮಯದಲ್ಲಿ, ಗ್ರಾಮದ ಹಿರಿಯರು, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ ಸುಗಣ್ಣವರ, ಎಸ್ ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಬಂಗೆನ್ನವರ, ಶಂಕರಗೌಡ ಪಾಟೀಲ, ಲಕ್ಷ್ಮೀನಾರಾಯಣ ಕಲ್ಲೂರ, ಶಿವಾಜಿ ಉಂಕ್ರಿಪಾಟೀಲ, ಬಸನಗೌಡ ಉಂಕ್ರಿಪಾಟೀಲ, ದತ್ತಾ ಬಂಡಿಗೇಣಿ, ಫಕೀರ ಕೋಲಕಾರ, ಇಂಗಳೆ, ಮುರಗೇಶ ಹಂಪಿಹೊಳಿ, ವಿಠ್ಠಲ ಮಂಡೋ, ಎಸ್.ವೈ. ರಾಯಕರ್, ಮಹಾಲಕ್ಷ್ಮಿ ದೇವಸ್ಥಾನದ ಟ್ರಸ್ಟ್ ಕಮಿಟಿಯವರು, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ