Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಂದಿನಿಂದ ಮದ್ಯದ ದರ ಹೆಚ್ಚಳ

ಬೆಂಗಳೂರು :

ಮದ್ಯದ ಮೇಲಿನ ಸುಂಕ ಪರಿಷ್ಕರಣೆ ಮತ್ತೆ ತೆರಿಗೆ ಫ್ಲ್ಯಾಬ್‌ಗಳ ಬದಲಾವಣೆಗಾಗಿ ಹಣಕಾಸು ಇಲಾಖೆಯು, ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕ) (ಎರಡನೇ ತಿದ್ದುಪಡಿ) ನಿಯಮಗಳು-2025ರ ಗಜೆಟ್ ಅಧಿಸೂಚನೆ ಹೊರಡಿಸಿದೆ. ಐಎಂಎಲ್‌ನ ತೆರಿಗೆ ಫ್ಲ್ಯಾಬ್‌ಗಳನ್ನು ಪೂರ್ಣ ಪ್ರಮಾಣದಲ್ಲಿ ಬದಲಾವಣೆ ಮಾಡಲಾಗಿದೆ.

ಭಾರತೀಯ ಮದ್ಯಗಳ (ಐಎಂಎಲ್)
ಮತ್ತು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) ಹೆಚ್ಚಿಸಿ ರಾಜ್ಯ ಸರ್ಕಾರ ಮಂಗಳವಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಪರಿಷ್ಕೃತ ದರವು ಗುರುವಾರದಿಂದ (ಮೇ 15) ಜಾರಿಗೆ ಬರಲಿದೆ.

ಎಇಡಿ ಹೆಚ್ಚಳದಿಂದ ಅಗ್ಗದ ದರದಲ್ಲಿ ಸಿಗುತ್ತಿದ್ದ ಬ್ರಾಂಡಿ, ವಿಸ್ಕಿ, ಜಿನ್, ರಮ್‌ನ ಬೆಲೆ ರಾಜ್ಯದಲ್ಲಿ ಇನ್ನು ಮುಂದೆ ಮತ್ತಷ್ಟು ದುಬಾರಿಯಾಗಲಿದೆ. 180 ಎಂಎಲ್‌ನ ಬಾಟಲಿ ಮತ್ತು ಸ್ಯಾಷೆಗಳ ಬೆಲೆಯಲ್ಲಿ ಗರಿಷ್ಠ ₹ 15 ಏರಿಕೆ ಆಗಲಿದೆ' ಎಂದು ಅಬಕಾರಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಈಗ ಜಾರಿಯಲ್ಲಿರುವ ನಿಯಮಗಳ ಪ್ರಕಾರ ಐಎಂಎಲ್‌ಗಳಲ್ಲಿ ಒಟ್ಟು 18 ತೆರಿಗೆ ಸ್ಟ್ರಾಬ್‌ಗಳಿವೆ. ಈ ಫ್ಲ್ಯಾಬ್‌ಗಳನ್ನು 16ಕ್ಕೆ ಇಳಿಸಲಾಗಿದೆ. ಮೊದಲ ನಾಲ್ಕು ಫ್ಲ್ಯಾಬ್‌ಗಳನ್ನು ಗರಿಷ್ಠ ಬೆಲೆಯನ್ನು ಪರಿಷ್ಕರಿಸಲಾಗಿದೆ.

ಎಇಡಿ ಏರಿಕೆಯೊಂದಿಗೆ ಪ್ರೀಮಿಯಂ ಅಥವಾ ಇತರೆ ಬಿಯ‌ರ್ ಬ್ರಾಂಡ್‌ಗಳ ಬೆಲೆಯು ಉತ್ಪಾದನಾ ವೆಚ್ಚವನ್ನು ಅವಲಂಬಿಸಿ ಪ್ರತಿ ಬಾಟಲಿಗೆ ಸರಾಸರಿ ₹ 5ರಿಂದ ₹ 15 ಏರಿಕೆ ಆಗಲಿದೆ. ಅಗ್ಗದ ಬಿಯರ್‌ಗಳ ಬೆಲೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗಲಿದ್ದು, ₹ 25 ರವರೆಗೆ ಕಡಿಮೆ ಆಗಲಿದೆ ಎಂದು ಅಬಕಾರಿ ಇಲಾಖೆ ಮೂಲಗಳು ತಿಳಿಸಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ