Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ‌ ನೌಕರರ ತುಟ್ಟಿಭತ್ಯೆಯನ್ನು ಶೇ 3.75ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.ಮೂಲವೇತನಕ್ಕೆ ಶೇ. 38.75 ರಷ್ಟು ತುಟ್ಟಿಭತ್ಯೆ ಇತ್ತು. ಇದನ್ನು ಜನವರಿಯಿಂದ ಪೂರ್ವಾನ್ವಯವಾಗುವಂತೆ ಶೇ. 42.5ಕ್ಕೆ ಹೆಚ್ಚಳ ಮಾಡಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ತನ್ನ ನೌಕರರ ತುಟ್ಟಿಭತ್ಯೆಯನ್ನು (Dearness Allowance) ಶೇ. ಶೇ.3.75ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು (Dearness Allowance) ಶೇಕಡಾ 38.75 ರಿಂದ ಶೇಕಡಾ 42.5 ಕ್ಕೆ ಪರಿಷ್ಕರಿಸಲು ಅನುಮೋದಿಸಲಾಗಿದೆ. ಈ ಬದಲಾವಣೆಯು ಪ್ರತಿ ವರ್ಷ 1792.71 ಕೋಟಿ ರೂಪಾಯಿಗಳ ವೆಚ್ಚವಾಗಲಿದೆ. ನಮ್ಮ ಉದ್ಯೋಗಿಗಳಿಗೆ ನಮ್ಮ ಸಮರ್ಪಣೆಯನ್ನು ಪುನರುಚ್ಚರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯಲ್ಲಿ 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಇದು ಅನ್ವಯವಾಗಲಿದೆ. ಅಲ್ಲದೆ, ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ ಎಂದು ತಿಳಿಸಲಾಗಿದೆ.

ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶ ಹೊರಡಿಸಲಾಗುತ್ತದೆ ಎಂದು ನಡವಳಿ ತಿಳಿಸಿದೆ.
ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರದ ಮುಂದೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ, ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಅದೇ ರೀತಿ ಕರ್ನಾಟಕದಲ್ಲೂ ತುಟ್ಟಿ ಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಶೇ. 4 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ನೌಕರರ ಸಂಘ ಪತ್ರ ಬರೆದು ಮನವಿ ಮಾಡಿತ್ತು.





Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ