Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ

Advertisement

ನವದೆಹಲಿ: ನಿರೀಕ್ಷೆಯಂತೆ ದೇಶಾದ್ಯಂತ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ.

ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ದರ 106.17 ರೂ. ಏರಿಕೆಯಾದರೆ ಡಿಸೇಲ್‌ ದರ 94.10 ರೂ. ತಲುಪಿದೆ.

ಬೆಲೆ ಏರಿಕೆಗೆ ಕಾರಣ ಏನು?
ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ (Crude Oil) ಬೆಲೆಯಲ್ಲಿ ಸತತ ಏರಿಳಿತವಾಗುತ್ತಿದೆ. ಪಶ್ಚಿಮ ಏಷ್ಯಾ ಹಾಗೂ ಇರಾನ್ ಸಂಘರ್ಷದಿಂದಾಗಿ ತೈಲ ಸಾಗಣೆಯ ಜಲಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಿದೆ. ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಕುಸಿದಿರುವುದರಿಂದ ಆಮದು ವೆಚ್ಚ ಹೆಚ್ಚಾಗಿದ್ದರಿಂದ ದರ ಏರಿಕೆ ಮಾಡಲಾಗಿದೆ.

ಜನರ ಮೇಲೆ ಪರಿಣಾಮ ಏನು?
ಟೆಂಪೋ ಮತ್ತು ಟ್ರಕ್‌ಗಳು ಡೀಸೆಲ್ ಬಳಸುವುದರಿಂದ ಸರಕು ಸಾಗಣೆ ದರಗಳು ತಕ್ಷಣವೇ ದುಬಾರಿಯಾಗಲಿವೆ. ಸಾಗಣೆ ವೆಚ್ಚ ಹೆಚ್ಚಾಗುವುದರಿಂದ ಮಾರುಕಟ್ಟೆಗೆ ಬರುವ ತರಕಾರಿ, ಹಣ್ಣು, ಧಾನ್ಯಗಳು ಮತ್ತು ಹಾಲಿನ ಬೆಲೆಗಳು ಹೆಚ್ಚಾಗಲಿವೆ. ಖಾಸಗಿ ಬಸ್ಸುಗಳು, ಆಟೋ ಮತ್ತು ಟ್ಯಾಕ್ಸಿಗಳ ಪ್ರಯಾಣ ದರವೂ ಏರಿಕೆಯಾಗಲಿದೆ. ಇದನ್ನೂ ಓದಿ: ತೈಲ ಕಂಪನಿಗಳಿಗೆ ಪ್ರತಿ ದಿನ 1,600 ಕೋಟಿ ರೂ. ನಷ್ಟ 

ಮಾರ್ಚ್ 2024 ರಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ 2 ರಷ್ಟು ಕಡಿತಗೊಳಿಸಲಾಗಿತ್ತು.

2022 ರಲ್ಲಿ 8 ರೂ. ಕಡಿತ:
ಮೇ 2022 ಅಬಕಾರಿ ಸುಂಕ ಕಡಿತವಾಗಿದ್ದರಿಂದ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 6 ರೂ.ರಷ್ಟು ಇಳಿಕೆಯಾಗಿತ್ತು. ಕೇಂದ್ರದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ವ್ಯಾಟ್ (VAT) ಕಡಿಮೆ ಮಾಡಿದ್ದರಿಂದ, ಗ್ರಾಹಕರಿಗೆ ಒಟ್ಟಾರೆಯಾಗಿ ಪ್ರತಿ ಲೀಟರ್‌ ಪೆಟ್ರೋಲ್ ಮೇಲೆ ಸುಮಾರು 9.5 ರೂ. ಮತ್ತು ಡೀಸೆಲ್ ಮೇಲೆ 7 ರೂ. ರಷ್ಟು ದರ ಇಳಿಕೆಯ ಲಾಭ ಸಿಕ್ಕಿತ್ತು.

ಕೋವಿಡ್ ನಂತರ ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು (Excise Duty) ಕಡಿತಗೊಳಿಸುವ ಮಹತ್ವದ ತೀರ್ಮಾನ ತೆಗೆದುಕೊಂಡಿತ್ತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿSSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧಮಾರಿಹಾಳ ಗ್ರಾಮದಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರ; ಉಚಿತ ನೇತ್ರ ತಪಾಸಣೆಯಿಂದ ಗ್ರಾಮಸ್ಥರಿಗೆ ಪ್ರಯೋಜನಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯ