Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿವಿಧ ಕೋಚ್‌ ಗಳಿಗೆ ರೈಲು ಟಿಕೆಟ್‌ ದರ ಹೆಚ್ಚಳ

ನವದೆಹಲಿ: ರೈಲ್ವೆ ಇಲಾಖೆಯು ಡಿಸೆಂಬರ್ 26 ರಿಂದ ಜಾರಿಗೆ ಬರುವಂತೆ ಪ್ರಯಾಣ ದರವನ್ನು ಹೆಚ್ಚಿಸಿದೆ. ಉಪನಗರ ರೈಲು ಪ್ರಯಾಣದ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲವಾದರೂ, ಸುದೀರ್ಘ ಪ್ರಯಾಣದ ದರಗಳು ಏರಿಕೆಯಾಗಲಿವೆ.
ಸಾಮಾನ್ಯ ದರ್ಜೆ 215 ಕಿ.ಮೀ ವರೆಗಿನ ಪ್ರಯಾಣಕ್ಕೆ ದರದಲ್ಲಿ ಏರಿಕೆ ಇಲ್ಲ. ಆದರೆ 215 ಕಿ.ಮೀ ಗಿಂತ ಹೆಚ್ಚಿನ ದೂರದ ಪ್ರಯಾಣಕ್ಕೆ ಪ್ರತಿ ಕಿ.ಮೀ ಗೆ 1 ಪೈಸೆ ಹೆಚ್ಚಳವಾಗಲಿದೆ.
ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳಲ್ಲಿ, ನಾನ್-ಎಸಿ ಮತ್ತು ಎಸಿ ಎರಡರಲ್ಲೂ, ಪ್ರತಿ ಕಿಲೋಮೀಟರ್‌ಗೆ 2 ಪೈಸೆ ಹೆಚ್ಚಳವಾಗಲಿದೆ. ಇದರರ್ಥ, ನಾನ್-ಎಸಿ ಬೋಗಿಗಳಲ್ಲಿ 500 ಕಿ.ಮೀ ಪ್ರಯಾಣಿಸುವ ಪ್ರಯಾಣಿಕರು ಇನ್ನು ಮುಂದೆ 10 ರೂ. ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ.

ಉಪನಗರ ರೈಲು ಸೇವೆಗಳು ಅಥವಾ ಮಾಸಿಕ ಟಿಕೆಟ್‌ಗಳ ದರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ದರ ಏರಿಕೆಯಿಂದಾಗಿ ರೈಲ್ವೆ ಇಲಾಖೆಗೆ ವಾರ್ಷಿಕ ಸುಮಾರು 600 ಕೋಟಿ ರೂ. ಹೆಚ್ಚುವರಿ ಆದಾಯ ಬರಲಿದೆ.
ಈ ಬೆಲೆ ಏರಿಕೆ ಏಕೆ ?
ಕಳೆದ ಒಂದು ದಶಕದಲ್ಲಿ ರೈಲ್ವೆ ಜಾಲ ಮತ್ತು ಕಾರ್ಯಾಚರಣೆ ವಿಸ್ತರಿಸಿದ್ದು, ಸಿಬ್ಬಂದಿ ವೆಚ್ಚ ಗಣನೀಯವಾಗಿ ಹೆಚ್ಚಿದೆ ಎಂದು ಇಲಾಖೆ ತಿಳಿಸಿದೆ. 2024-25ರ ಹಣಕಾಸು ವರ್ಷದಲ್ಲಿ ಸಿಬ್ಬಂದಿ ವೆಚ್ಚ 1,15,000 ಕೋಟಿ ರೂ.ಗಳಿಗೆ ಏರಿದ್ದರೆ, ಪಿಂಚಣಿ ವೆಚ್ಚ 60,000 ಕೋಟಿ ರೂ. ತಲುಪಿದೆ. ಒಟ್ಟಾರೆ ಕಾರ್ಯಾಚರಣೆಯ ವೆಚ್ಚ 2,63,000 ಕೋಟಿ ರೂ.ಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ