Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸ್ವಾತಂತ್ರ್ಯ ದಿನಾಚರಣೆ, ಗಣೇಶ ಚತುರ್ಥಿಗೆ ವಿಶೇಷ ರೈಲುಗಳ ಸಂಚಾರ

ಬೆಳಗಾವಿ : ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ನಿರೀಕ್ಷಿತ ಹೆಚ್ಚುವರಿ ಜನದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆ ಯಶವಂತಪುರ–ಮಡಗಾಂವ್ ಮತ್ತು ಸರ್‌.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್‌ನಲ್ಲಿ (ಎಸ್‌ಎಂವಿಟಿ) ಬೆಂಗಳೂರು–ಬೆಳಗಾವಿ ನಡುವೆ ತಲಾ ಒಂದು ಟ್ರಿಪ್ ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲಿದೆ.

ವಿಶೇಷ ಎಕ್ಸ್​ಪ್ರೆಸ್ ರೈಲುಗಳ ವಿವರ:

1. ರೈಲು ಸಂಖ್ಯೆ 06541/06542 ಯಶವಂತಪುರ–ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್​ಪ್ರೆಸ್ ರೈಲು (ಒಂದು ಟ್ರಿಪ್)

ರೈಲು ಸಂಖ್ಯೆ 06541 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್​ಪ್ರೆಸ್ ರೈಲು, ಆಗಸ್ಟ್ 14, 2025 ರಂದು ರಾತ್ರಿ 11:55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಆಗಸ್ಟ್ 15ರಂದು ಸಂಜೆ 6:05ಕ್ಕೆ ಮಡಗಾಂವ್ ತಲುಪಲಿದೆ. ಮತ್ತೆ ಮರಳಿ, ರೈಲು ಸಂಖ್ಯೆ 06542 ಮಡಗಾಂವ್–ಯಶವಂತಪುರ ವಿಶೇಷ ಎಕ್ಸ್​ಪ್ರೆಸ್ ರೈಲು ಆಗಸ್ಟ್ 17, 2025 ರಂದು ರಾತ್ರಿ 10:15ಕ್ಕೆ ಮಡಗಾಂವಿನಿಂದ ಹೊರಟು, ಆಗಸ್ಟ್ 18 ರಂದು ಸಂಜೆ 4:30 ಗಂಟೆಗೆ ಯಶವಂತಪುರಕ್ಕೆ ತಲುಪಲಿದೆ.

ನಿಲುಗಡೆ: ಈ ರೈಲುಗಳು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲ್ಲಲಿವೆ. ಈ ರೈಲು ಒಟ್ಟು 18 ಬೋಗಿಗಳನ್ನು ಹೊಂದಿದ್ದು, ಅದರಲ್ಲಿ 12 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳನ್ನು ಹೊಂದಿದೆ.

2. ರೈಲು ಸಂಖ್ಯೆ 06571/06572 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ ರೈಲು (ಒಂದು ಟ್ರಿಪ್):

ರೈಲು ಸಂಖ್ಯೆ 06571 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್​ಪ್ರೆಸ್ ರೈಲು ಆಗಸ್ಟ್ 22, 2025ರಂದು ಸಂಜೆ 7:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 7:30ಕ್ಕೆ ಬೆಳಗಾವಿ ತಲುಪಲಿದೆ. ಇದರ ಜೋಡಿ, ರೈಲು ಸಂಖ್ಯೆ 06572 ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ ರೈಲು ಆಗಸ್ಟ್ 23, 2025ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

3. ರೈಲು ಸಂಖ್ಯೆ 06573/06574 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ ರೈಲು (ಒಂದು ಟ್ರಿಪ್):

ರೈಲು ಸಂಖ್ಯೆ 06573 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್​ಪ್ರೆಸ್ ರೈಲು ಆಗಸ್ಟ್ 26, 2025 ರಂದು ಸಂಜೆ 7:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 8:25ಕ್ಕೆ ಬೆಳಗಾವಿ ತಲುಪಲಿದೆ. ಇದರ ಜೋಡಿ, ರೈಲು ಸಂಖ್ಯೆ 06574 ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ ರೈಲು ಆಗಸ್ಟ್ 27, 2025ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ನಿಲುಗಡೆ: ಈ ಎರಡೂ ರೈಲುಗಳು ಸಹ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ. ಈ ರೈಲುಗಳಲ್ಲಿ 1 ಎಸಿ-ಟು ಟೈಯರ್, 3 ಎಸಿ-ತ್ರಿ ಟೈಯರ್, 10 ಸ್ಲೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ಡಿ ಸೇರಿ ಒಟ್ಟು 19 ಬೋಗಿಗಳಿವೆ.

ಹೆಚ್ಚುವರಿ ಮಾಹಿತಿ ಮತ್ತು ಟಿಕೆಟ್ ಕಾಯ್ದಿರಿಸಲು, ದಯವಿಟ್ಟು ಭಾರತೀಯ ರೈಲ್ವೆಯ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ ಅಥವಾ ರೈಲ್ವೆ ಸಹಾಯವಾಣಿ ಸಂಖ್ಯೆ 139ಗೆ ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ಮೂಲಕ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ